ದೇಶ

ಈಗ ಆರೋಗ್ಯ ಸುಧಾರಿಸಿದೆ, ಶೀಘ್ರ ಭಾರತಕ್ಕೆ ವಾಪಸ್ ಆಗುತ್ತೇನೆ: ಅರುಣ್ ಜೇಟ್ಲಿ

Srinivasamurthy VN
ನ್ಯೂಯಾರ್ಕ್: ಮೊದಲಿಗಿಂತಲೂ ಈಗ ಆರೋಗ್ಯ ಸಾಕಷ್ಟು ಸುಧಾರಿಸಿದ್ದು, ಶೀಘ್ರವೇ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಪ್ರಸ್ತುತ ಅನಾರೋಗ್ಯ ಸಮಸ್ಯೆಯಿಂದಾಗಿ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಸಚಿವ ಪಿಯೂಶ್ ಗೋಯಲ್ ಅವರು ಮಂಡಿಸಿದ 2019ನೇ ಸಾಲಿನ ಬಜೆಟ್ ಕುರಿತು ಹರ್ಷ ವ್ಯಕ್ತಪಡಿಸಿದ ಅವರು, ಜನಪರ ಬಜೆಟ್ ಎಂದು ಶ್ಲಾಘಿಸಿದರು.
ಇದೇ ವೇಳೆ ತಮ್ಮ ಆರೋಗ್ಯದ ಕುರಿತು ಮಾತನಾಡಿದ ಜೇಟ್ಲಿ, ಮೊದಲಿಗಿಂತಲೂ ಈಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈಗ ನಾನು ಸಾಕಷ್ಟು ಸುಧಾರಿಸಿದ್ದು, ಶೀಘ್ರವೇ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಸಾಫ್ಟ್ ಟಿಶ್ಯೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನ್ಯೂಯಾರ್ಕ್ ಗೆ ರವಾನೆ ಮಾಡಲಾಗಿದೆ. ಕಳೆದ ಮೇ ತಿಂಗಳಲ್ಲಿ  ಜೇಟ್ಲಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಆಗಸ್ಚ್ ತಿಂಗಳಿನಲ್ಲಿ ಅವರು ಸಾಫ್ಟ್ ಟಿಶ್ಯೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ತಮ್ಮ ಆಪ್ತ ವೈದ್ಯರ ಸಲಹೆ ಮೇರೆಗೆ ಜೇಚ್ಲಿ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
SCROLL FOR NEXT