ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಜೆಇಎಂ ಉಗ್ರರ ಅಡಗುದಾಣದ ಮೇಲೆ ಸೇನೆ ದಾಳಿ, 3 ಉಗ್ರರ ಬಂಧನ

ಕಾಶ್ಮೀರದಲ್ಲಿ ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಜಾಲವನ್ನು ಭಾರತೀಯ ಸೈನಿಕರು ಬೇಧಿಸಿದ್ದು, ಜೆಇಎಂ ಉಗ್ರರ ಅಡಗುದಾಣದ ಮೇಲೆ ದಾಳಿ ಮಾಡಿ ಮೂವರು ಉಗ್ರರನ್ನು ಸೈನಿಕರು ಬಂಧಿಸಿದ್ದಾರೆ.

ಶ್ರೀನಗರ: ಕಾಶ್ಮೀರದಲ್ಲಿ ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಜಾಲವನ್ನು ಭಾರತೀಯ ಸೈನಿಕರು ಬೇಧಿಸಿದ್ದು, ಜೆಇಎಂ ಉಗ್ರರ ಅಡಗುದಾಣದ ಮೇಲೆ ದಾಳಿ ಮಾಡಿ ಮೂವರು ಉಗ್ರರನ್ನು ಸೈನಿಕರು ಬಂಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಸೋಪೋರ್ ನಲ್ಲಿ ಈ ದಾಳಿ ನಡೆದಿದ್ದು, ಬಂಧಿತ ಉಗ್ರರನ್ನು ಗುಲಾಮ್ ಖಾದಿರ್ ಅಲಿಯಾಸ್ ಕಾಸಿರ್, ಏಜಾಜ್ ಅಹ್ಮದ್ ಖಾನ್ ಮತ್ತು ಒವಾಯಿಸ್ ಖಾಲಿದ್ ದಾರ್ ಎಂದು ಗುರುತಿಸಲಾಗಿದೆ. ಮೂವರು ಕಳೆದ ಹಲವು ವರ್ಷಗಳಿಂದ ಜೆಇಎಂ ಉಗ್ರಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ಅಡಗುದಾಣದ ರಹಸ್ಯ ಬಹಿರಂಗ ಪಡಿಸಿದ ಗ್ರೆನೇಡ್ ದಾಳಿ ತನಿಖೆ
ಇನ್ನು ಕಳೆದ ಜನವರಿ 25ರಂದು ಇದೇ ಸೋಪೋರ್ ನಲ್ಲಿರುವ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗ್ರೆನೇಡ್ ದಾಳಿ ಮಾಡಿ ಪರಾರಿಯಾಗಿದ್ದರು. ಈ ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದ ಸೈನಿಕರು ಕೆಲ ಶಂಕಿತ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇರಿಸಿದ್ದರು. ಈ ವೇಳೆ ಜೆಇಎಂ ಉಗ್ರರ ಅಡಗುದಾಣದ ಮಾಹಿತಿ ತಿಳಿದಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಸೈನಿಕರು ದಾಳಿ ಮಾಡಿ ಅಡಗುದಾಣವನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ ಅಲ್ಲಿದ್ದ ಮೂವರೂ ಉಗ್ರರನ್ನು ಜೀವ ಸಹಿತ ಬಂಧಿಸಿದ್ದಾರೆ. ಅಲ್ಲದೆ ಅಲ್ಲಿದ್ದ ಅಪಾರ ಪ್ರಮಾಣದ ಬಂದೂಕುಗಳು, ಬುಲೆಟ್ ಗಳ ಕಾರ್ಟ್ರಿಡ್ಜ್ ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಅಂತೆಯೇ ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಸಿಆರ್ ಪಿಎಫ್ ಕ್ಯಾಂಪ್ ಮೇಲಿನ ಗ್ರೆನೇಡ್ ದಾಳಿಯಲ್ಲಿ ತಮ್ಮ ಪಾತ್ರವಿದೆ ಎಂದು ಉಗ್ರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ಸಿಆರ್ ಪಿಎಫ್ ವಕ್ತಾರರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ