ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಈಗ ಶಂಕುಸ್ಥಾಪನೆ ಮಾಡಿರುವ ಯೋಜನೆಗಳನ್ನು ನಾನೇ ಉದ್ಘಾಟಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಫೆ.03 ರಂದು ಜಮ್ಮು-ಕಾಶ್ಮೀರದ ಲೇಹ್ ನಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿರುವ ಪ್ರಧಾನಿ ಮೋದಿ 2019 ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದ ಯೋಜನೆಗಳನ್ನು ಇಂದು ನಾನು ಉದ್ಘಾಟನೆ ಮಾಡುತ್ತಿದ್ದೇನೆ. ಇಂದು ನಾನು ಶಂಕುಸ್ಥಾಪನೆ ಮಾಡುತ್ತಿರುವ ಯೋಜನೆಗಳ ಉದ್ಘಾಟನೆಯನ್ನೂ ನಾನೇ ಮಾಡುತ್ತೇನೆ ಎಂದು ಹೇಳಿದ್ದಾರೆ.