ಪ್ರಕಾಶ್ ಜಾವಡೇಕರ್ 
ದೇಶ

ಮಮತಾ ಬ್ಯಾನರ್ಜಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಪ್ರಕಾಶ್ ಜಾವಡೇಕರ್

ಮಮತಾ ಬ್ಯಾನರ್ಜಿ ವರ್ಸಸ್ ಸಿಬಿಐನಿಂದಾಗಿ ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ನವದೆಹಲಿ: ಮಮತಾ ಬ್ಯಾನರ್ಜಿ ವರ್ಸಸ್ ಸಿಬಿಐನಿಂದಾಗಿ ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ಪ್ರತಿಪಕ್ಷಗಳೂ ಮಮತಾ ಬ್ಯಾನರ್ಜಿಗೆ ಬೆಂಬಲ ನೀಡುತ್ತಿವೆ. ಈ ಜನರು ಯಾರು? ಅವರೆಲ್ಲಾ ಜಾಮೀನಿನ ಮೇಲೆ ಹೊರಗಡೆ ಇರುವವರು. ಅಂತಹವರೆಲ್ಲಾ ಮಮತಾ ಬ್ಯಾನರ್ಜಿ ಜೊತೆಗೆ ಕೈ  ಜೋಡಿಸಿದ್ದಾರೆ. ಇದು ಮಹಾಘಟಬಂಧನ್ ಅಲ್ಲ, ಭ್ರಷ್ಟಾಚಾರಕ್ಕಾಗಿ  ಅವರೆಲ್ಲಾ ಒಂದುಗೂಡಿದ್ದಾರೆ. ಭ್ರಷ್ಟರು  ಒಟ್ಟಿಗೆ ನಿಂತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಕೊಲ್ಕತ್ತಾದಲ್ಲಿ ಏನು ಸಂಭವಿಸಿದೆ ಅದು ಪ್ರಜಾಪ್ರಭುತ್ವ ವ್ಯವಸ್ಥೆ ಹರಣ ಮಾಡಿದಂತಾಗಿದೆ ಎಂದು ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ಈ ಮಧ್ಯೆ ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಶರದಾ ಚಿಟ್ ಫಂಡ್ ಪ್ರಕರಣದಲ್ಲಿ ಅನೇಕ ರಾಜಕಾರಣಿಗಳು, ಪ್ರಭಾವಿಗಳು ತೊಡಗಿಸಿಕೊಂಡಿರುವ ಬಗ್ಗೆ  ಸಿಬಿಐ ತನಿಖೆಯಿಂದ ತಿಳಿದುಬಂದಿದೆ.  ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ,  ಅಲ್ಲಿನ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ  ನೋಟಿಸ್ ಜಾರಿ ಮಾಡಿದ್ದು, ಪರಿಸ್ಥಿತಿ ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ  ಆಡಳಿತ ವ್ಯವಸ್ಥೆ ಕುಸಿದು ಬಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಗೆ ತರುವುದು ಸೂಕ್ತ ಎಂದು ಕೇಂದ್ರ ಉಕ್ಕು ಸಚಿವ ಬೀರೇಂದ್ರ ಸಿಂಗ್ ಚೌದರಿ ಹೇಳಿದ್ದಾರೆ.
ಈ ಮಧ್ಯೆ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.ಹಾಗಾಗೀ ಹೀಗೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT