ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ವಕೀಲರ ಮೂಲಕ ದೂರುದಾರ ಸುಬ್ರಮಣಿಯನ್ ಸ್ವಾಮಿ ಅವರ ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ದಾರೆ.
ಬಿಜೆಪಿ ಸಂಸದ ಹಾಗೂ ದೂರುದಾರ ಸುಬ್ರಮಣಿಯನ್ ಸ್ವಾಮಿ ಅವರನ್ನು ಕ್ರಾಸ್ ಎಕ್ಸಾಮಿನೇಶನ್ ಮಾಡಲಾಯಿತು, ರಾಹುಲ್ ಮತ್ತು ಸೋನಿಯಾ ತಮ್ಮ ಪರವಾಗಿ ತಮ್ಮ ವಕೀಲರನ್ನು ಕಳುಸಿದ್ದರು.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಒಡೆತನದ ಯಂಗ್ ಇಂಡಿಯನ್ ಎಂಬ ಸಂಸ್ಥೆಯು ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ್ದ, 'ಕ್ವಾಮಿ ಆವಾಜ್' ಮತ್ತು 'ನ್ಯಾಷನಲ್ ಹೆರಾಲ್ಡ್' ಪತ್ರಿಕೆಗಳನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಕಂಪನಿಯನ್ನು(ಎಜೆ) ವಶಪಡಿಸಿಕೊಂಡಿದೆ ಎಂದು ತಮ್ಮ ಅರ್ಜಿಯಲ್ಲಿ ಸ್ವಾಮಿ ಆರೋಪಿಸಿದ್ದಾರೆ.
ಪಕ್ಷಕ್ಕೆ ಬಂದ ದೇಣಿಗೆಯ 90 ಕೋಟಿ ರೂಪಾಯಿಯನ್ನು ಸಾಲ ನೀಡಿ ಐದು ಸಾವಿರ ಕೋಟಿ ರೂಪಾಯಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲಾಗಿದೆ ಎಂದು ಸ್ವಾಮಿ ದೂರಿದ್ದಾರೆ,
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆಗೆ ಸುಮನ್ ದುಬೆ. ಮೋತಿ ಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸ್ಯಾಮ್ ಪಿತ್ರೋಡಾ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಕಂಪನಿ ಪ್ರಕರಣದ ಆರೋಪಿಗಳನ್ನಾಗಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics