ಸಂಗ್ರಹ ಚಿತ್ರ 
ದೇಶ

'ಗೆಟ್ ವೆಲ್ ಸೂನ್ ರಾಹುಲ್ ಜೀ'; 'ಶರದಾ ಹಗರಣ' ಸಂಬಂಧ ಕಾಂಗ್ರೆಸ್ ಅಧ್ಯಕ್ಷರ ಕಾಲೆಳೆದ ಬಿಜೆಪಿ

ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಟೀಕಿಸಿದ್ದು, ಈ ಹಿಂದೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮಮತಾ ವಿರುದ್ಧ ಮಾಡಲಾಗಿದ್ದ ಟ್ವೀಟ್ ಗಳನ್ನು ಬಿಜೆಪಿ ಟ್ವೀಟ್ ಮಾಡಿದೆ.

ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದಲ್ಲಿ ಉಂಟಾಗಿರುವ ಹೈಡ್ರಾಮಾ ಸಂಬಂಧ ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಟೀಕಿಸಿದ್ದು, ಈ ಹಿಂದೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮಮತಾ ವಿರುದ್ಧ ಮಾಡಲಾಗಿದ್ದ ಟ್ವೀಟ್  ಗಳನ್ನು ಬಿಜೆಪಿ ಟ್ವೀಟ್ ಮಾಡಿದೆ.
ಇಂದು ಬೆಳಗ್ಗೆ ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತ ಟ್ವೀಟ್ ಮಾಡಿದ್ದು, 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಹುಶಃ ಮರೆಯುವ ಸಮಸ್ಯೆ ಇರಬೇಕು ಎಂದೆನಿಸುತ್ತದೆ. ಅವರು ಈ ಹಿಂದೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗ ಅಲ್ಲಿ ತಾವೇ ಆಡಿದ್ದ ಮಾತುಗಳನ್ನು ಮರೆತಿದ್ದಾರೆ ಎಂದೆನಿಸುತ್ತಿದೆ. ರಾಹುಲ್ ಗಾಂಧಿ ಅವರೇ ಶೀಘ್ರ ಚೇತರಿಸಿಕೊಂಡು ಗುಣಮುಖರಾಗಿ ಬನ್ನಿ ಎಂದು ಬಿಜೆಪಿ ರಾಹುಲ್ ಗಾಂಧಿ ಕಾಲೆಳೆದಿದೆ.
ಅಲ್ಲದೆ ಈ ಹಿಂದೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಇದೇ ಶರದಾ ಹಗರಣಕ್ಕೆ ಸಂಬಂಧಿಸಿದಂತೆ ಮತ್ತು ಮಮತಾ ಸರ್ಕಾರದ ವಿರುದ್ಧ ಮಾಡಿದ್ದ ಸರಣಿ ಆರೋಪಗಳ ಟ್ವೀಟ್ ಗಳ ಚಿತ್ರವನ್ನು ಬಿಜೆಪಿ ಟ್ವಿಟರ್ ಗೆ ಅಪ್ಲೋಡ್ ಮಾಡಿದೆ. ಬಿಜೆಪಿ ಪಕ್ಷದ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT