ಅಮಿತ್ ಶಾ 
ದೇಶ

ಚಂದ್ರಬಾಬು ನಾಯ್ಡು ಪಾಲಿಗೆ ಎನ್ ಡಿ ಎ ಬಾಗಿಲು ಶಾಶ್ವತವಾಗಿ ಮುಚ್ಚಿದೆ: ಅಮಿತ್ ಶಾ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪಾಲಿಗೆ ಎನ್ ಡಿ ಎ ಮೈತ್ರಿ ಕೂಟದ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ...

ಹೈದರಾಬಾದ್: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪಾಲಿಗೆ ಎನ್ ಡಿ ಎ ಮೈತ್ರಿ ಕೂಟದ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಆಂದ್ರಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ಪ್ರಜಾ ಚೈತನ್ಯ ಯಾತ್ರಾ  ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಲೋಕಸಭೆ ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ, ಎನ್ ಡಿಎ ಮೈತ್ರಿ ಕೂಟ ಸೇರಲು ಚಂದ್ರಬಾಬು ಮುಂದೆ ಬರುತ್ತಾರೆ, ಅವರಿಗೆ ಎಂದು ಹೇಳಿದ್ದಾರೆ.
2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ ನಾಯ್ಡು ಎನ್ ಡಿಎ ಮೈತ್ರಿ ಕೂಟ ಸೇರಿದ್ದರು, ಆದರೆ ಅವರ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತ ಜನರು ಅಸಮಾಧಾನ ವ್ಯಕ್ತ ಪಡಿಸಿದರು. ಈ ವೇಳೆ ನಾಯ್ಡು ಕೇಂದ್ರಸರ್ಕಾರ ಮತ್ತುಮೋದಿ ಅವರನ್ನು ಬೈಯ್ಯಲು ಆರಂಭಿಸಿದರು ಎಂಮ ಆರೋಪಿಸಿದ್ದಾರೆ,
ಬಿಜೆಪಿಯನ್ನು ಬೈಯ್ಯುವ ಮೂಲಕ ನಾಯ್ಡು ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ, ತಮ್ಮ ಮಗ ಲೋಕೇಶ್ ನನ್ನು ಮುಖ್ಯಮಂತ್ರಿಯನ್ನಾಗಿಸಲು ಯತ್ನಿಸುತ್ತಿದ್ದಾರೆ ಎಂದು ಅಮಿತ್ ಶಾ ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ