ದೇಶ

ವಾದ್ರಾ ವಿಚಾರಣೆಯ ನಡುವೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪತ್ನಿ ಪ್ರಿಯಾಂಕಾ ಗಾಂಧಿ ಅಧಿಕಾರ ಸ್ವೀಕಾರ

Lingaraj Badiger
ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ)ದಿಂದ ಪತಿ ರಾಬರ್ಟ್ ವಾದ್ರಾ ಅವರ ತೀವ್ರ ವಿಚಾರಣೆಯ ನಡುವೆಯೇ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರು ಅಕ್ರಮವಾಗಿ ವಿದೇಶಿ ಸ್ವತ್ತುಗಳನ್ನು ಹೊಂದಿರುವ ಆರೋಪ ಎದುರಿಸುತ್ತಿರುವ ಪತಿ ರಾಬರ್ಟ್ ವಾದ್ರಾ ಅವರನ್ನು ವಿಚಾರಣೆಗಾಗಿ ಇಡಿ ಕಚೇರಿಗೆ ಡ್ರಾಪ್ ಮಾಡಿ, ಬಳಿಕ ಕಾಂಗ್ರೆಸ್ ಪ್ರಧಾನ ಕಚೇರಿಗೆ ಆಗಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.
ಇತ್ತೀಚಿಗಷ್ಟೇ ಪೂರ್ವ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಳ್ಳುವ ಮೂಲಕ ಸಕ್ರಿಯ ರಾಜಕೀಯ ಅಖಾಡಕ್ಕೆ ಧುಮುಕಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಸಾಥ್‌ ನೀಡಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ರಾಹುಲ್​ ಗಾಂಧಿ ಪಕ್ಕದ ಕೊಠಡಿಯನ್ನೇ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದೆ.
SCROLL FOR NEXT