ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ತೀರ್ಪಿಗೆ ಬದ್ಧ: ಸುಪ್ರೀಂನಲ್ಲಿ ದೇವಸ್ವಂ ಮಂಡಳಿ ಯೂಟರ್ನ್

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ)....

ಶಬರಿಮಲೆ
Lingaraj Badiger
Updated On : 6 Feb 2019, 4:25 am
ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಸುಪ್ರೀಂ ಕೋರ್ಟ್ ನಲ್ಲಿ ಯೂಟರ್ನ್ ಹೊಡೆದಿದ್ದು, ಕೋರ್ಟ್ ತೀರ್ಪಿಗೆ ತಾನು ಬದ್ಧ ಎಂದು ಬುಧವಾರ ಹೇಳಿದೆ.
ಇಂದು ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶ ನೀಡಿದ್ದ ಸುಪ್ರೀಂ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆ ವೇಳೆ,
ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಶಬರಿಮಲೆ ಅಯ್ಯಪ್ಪ ದೇಗುಲ ಆಡಳಿತ ಮಂಡಳಿ ಕೋರ್ಟ್ ತಿಳಿಸಿದೆ.

Advertisement

Advertisement

ಈ ಹಿಂದೆ 10 ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಟಿಡಿಬಿ ಇದೀಗ ತನ್ನ ನಿರ್ಧಾರ ಬದಲಿಸಿದ್ದು, ಕಲಂ 25(1) ಪ್ರಕಾರ ಧಾರ್ಮಿಕ ಆಚರಣೆಯಲ್ಲಿ ಎಲ್ಲಾ ವ್ಯಕ್ತಿಗಳು ಸಮಾನರು ಎಂದು ಹೇಳಿರುವುದಾಗಿ ಟಿಡಿಬಿ ಪರ ವಕೀಲ ರಾಕೇಶ್ ದ್ವಿವೇದಿ ಅವರು ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ತಿಳಿಸಿದ್ದಾರೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. 
ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments