ನವದೆಹಲಿ: ಅಕ್ರಮವಾಗಿ ವಿದೇಶಿ ಸ್ವತ್ತುಗಳನ್ನು ಹೊಂದಿರುವ ಆರೋಪ ಎದುರಿಸುತ್ತಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬುಧವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಇಂದು ಮಧ್ಯಾಹ್ನ ರಾಬರ್ಟ್ ವಾದ್ರಾ ಅವರನ್ನು ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಜಾಮ್ ನಗರದಲ್ಲಿರುವ ಇಡಿ ಕಚೇರಿಗೆ ಡ್ರಾಪ್ ಮಾಡಿದರು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, "ಏನಾಗಿದೆ ಎಂಬುದು ಪ್ರತಿಯೊಬ್ಬರಿಗೂ ಗೊತ್ತು. ನನ್ನ ಕುಟುಂಬದ ಪರವಾಗಿ ನಾನಿದ್ದೇನೆ," ಎಂದಷ್ಟೇ ಉತ್ತರಿಸಿದರು.
ಇತ್ತ ಪತಿಯ ತೀವ್ರ ವಿಚಾರಣೆಯ ನಡೆಯುತ್ತಿದ್ದರೆ ಅತ್ತ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪ್ರಧಾನ ಕಚೇರಿಗೆ ತೆರಳಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.
ರಾಬರ್ಟ್ ವಾದ್ರಾ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿದ್ದು, ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾದ ವಾದ್ರಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಕಳೆದ ವಾರ ದೆಹಲಿ ನ್ಯಾಯಾಲಯ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಅಕ್ರಮ ಹಣದಲ್ಲಿ ಲಂಡನ್ನ ಬ್ರಿಯಾನ್ಸ್ಟನ್ನಲ್ಲಿ ಸುಮಾರು 18 ಕೋಟಿ ಮೌಲ್ಯದ ಆಸ್ತಿ ಖರೀದಿಸಿರುವ ಆರೋಪದಲ್ಲಿ ರಾಬರ್ಟ್ ವಾದ್ರಾ ಸಿಲುಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics