ರಾಹುಲ್ ಗಾಂಧಿ 
ದೇಶ

ಲೋಕಸಭೆ ಚುನಾವಣೆಗೆ ಸದ್ಯದಲ್ಲಿಯೇ ಅಭ್ಯರ್ಥಿಗಳ ಆಯ್ಕೆ; ಹೊಸ ಮುಖಗಳಿಗೆ ಮಣೆ: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆ ಸಿದ್ದತೆಯಲ್ಲಿರುವ ಕಾಂಗ್ರೆಸ್ ಈ ತಿಂಗಳ ಕೊನೆಗೆ ಅಥವಾ ಮಾರ್ಚ್ ಮೊದಲ ...

ನವದೆಹಲಿ: ಲೋಕಸಭೆ ಚುನಾವಣೆ ಸಿದ್ದತೆಯಲ್ಲಿರುವ ಕಾಂಗ್ರೆಸ್ ಈ ತಿಂಗಳ ಕೊನೆಗೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಕೆಲಸದಲ್ಲಿ ನಿರತವಾಗಿದೆ.

ಈ ಬಾರಿ ಚುನಾವಣೆಯಲ್ಲಿ ಕೆಳ ವರ್ಗದ ಯುವ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಇಂತವರನ್ನು ಸಂಸತ್ತು ಪ್ರವೇಶಿಸಲು ಉತ್ತೇಜನ ನೀಡಲಾಗುವುದು. ಕಳೆದ ಎರಡು ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತ ನಾಯಕರ ಸ್ಥಾನಕ್ಕೆ ಈ ಬಾರಿ ಯುವ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ಕೊಡಲಾಗುವುದು ಎಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಚುನಾವಣೆಗೆ ಒಂದೆರಡು ತಿಂಗಳ ಮೊದಲೇ ಅಭ್ಯರ್ಥಿಗಳನ್ನು ಘೋಷಿಸಿದರೆ ಅವರು ಆಯಾ ಕ್ಷೇತ್ರಗಳಲ್ಲಿ ತಳಮಟ್ಟದಿಂದ ಕೆಲಸ ಮಾಡಲು ಸಹಾಯವಾಗುತ್ತದೆ ಎನ್ನುತ್ತಾರೆ ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೆವಾಲಾ.

ಈ ಕುರಿತು ನಿನ್ನೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಸಭೆ ಬಳಿಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಪಕ್ಷದ ನಾಯಕರು ಸಭ್ಯತೆಯಿಂದ ನಮ್ರತೆಯಿಂದ ಪ್ರಚಾರ ನಡೆಸಬೇಕು, ನಕಾರಾತ್ಮಕವಾಗಿ ಪ್ರಚಾರ ನಡೆಸದಂತೆ ಪಕ್ಷದ ಪದಾಧಿಕಾರಿಗಳಿಗೆ ಮತ್ತು ಅಭ್ಯರ್ಥಿಗಳಿಗೆ ರಾಹುಲ್ ಗಾಂಧಿ ಸೂಚಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಸ್ಪರ್ಧಿಸಲಿದ್ದು, ಅಗತ್ಯವಿರುವಲ್ಲಿ ಮೈತ್ರಿ ಮಾಡಿಕೊಳ್ಳಲಿದೆ ಎಂದು ಎಐಸಿಸಿ ಸಂಘಟನೆಯ ಮುಖ್ಯಸ್ಥ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್