ದೇಶ

ಶಿಲ್ಲಾಂಗ್: ಸಿಬಿಐ ನಿಂದ ಕೋಲ್ಕತಾ ಪೊಲೀಸ್ ಆಯುಕ್ತರ ತೀವ್ರ ವಿಚಾರಣೆ

Srinivasamurthy VN
ಶಿಲ್ಲಾಂಗ್: ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಶಿಲ್ಲಾಂಗ್ ನಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಈ ಹಿಂದೆ ಕೋಲ್ಕತಾದ ಪೊಲೀಸ್ ಆಯುಕ್ತರ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾಗ ದೊಡ್ಡ ಹೈಡ್ರಾಮ ಸೃಷ್ಟಿಯಾಗಿತ್ತು. ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದರು. ಬಳಿಕ ಈ ಬಗ್ಗೆ ಸುಪ್ರೀಂ ಕೋರ್ಟ್ ರಾಜೀವ್ ಕುಮಾರ್ ಅವರ ವಿಚಾರಣೆ ನಡೆಯಬೇಕು ಎಂದು ಹೇಳಿದ್ದು ಮಾತ್ರವಲ್ಲದೆ ರಾಜೀವ್ ಕುಮಾರ್ ಸಿಬಿಐ ತನಿಖೆಗೆ ಸಹಕರಿಸಬೇಕು ಎಂದು ತೀರ್ಪು ನೀಡಿತು.
ಅದರಂತೆ ಇಂದು ರಾಜೀವ್ ಕುಮಾರ್ ಅವರು ಶಿಲ್ಲಾಂಗ್ ಗೆ ತೆರಳಿದ್ದು, ಇಂದು ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯಿಂದ ತೆರಳಿರುವ ಹಿರಿಯ ಸಿಬಿಐ ಅಧಿಕಾರಿಗಳು ಕೂಡ ಶಿಲ್ಲಾಂಗ್ ತೆರಳಿದ್ದು, ಅಲ್ಲಿ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. 
SCROLL FOR NEXT