ದೇಶ

ತಮಿಳುನಾಡು: ವಿದ್ಯುತ್ ಟವರ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

Nagaraja AB

ತಿರುವಣ್ಣಾಮಲೈ: ವ್ಯಕ್ತಿಯೋರ್ವ ನಿರ್ಮಾಣ ಹಂತದ ವಿದ್ಯುತ್ ಟವರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.

32 ವರ್ಷದ ನೌಕರ ವಿದ್ಯುತ್ ಟವರ್ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಆತನ ಸಂಬಂಧಿಗಳು ಆತ್ಮಹತ್ಯೆ ಮಾಡಿಕೊಳ್ಳದ ಕೇಳಗೆ ಬರುವಂತೆ ಅಂಗಲಾಚಿದ್ದಾರೆ. ಆದರೆ, ಇದ್ಯಾವುದಕ್ಕೂ ಕ್ಯಾರೆ ಅನ್ನದ ಆತ ಟವರ್ ಮೇಲಿಂದ ಹಾರಿ ಸಾವನ್ನಪ್ಪಿದ್ದಾನೆ.

ಈತ ಟವರ್ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ.  ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

SCROLL FOR NEXT