ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೂರನೇ ಬಾರಿ ಇ.ಡಿ ಮುಂದೆ ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ ರಾಬರ್ಟ್ ವಾದ್ರಾ ಶನಿವಾರ ಅಕ್ರಮ ಹಣ ವರ್ಗಾವಣೆ ...

ರಾಬರ್ಟ್ ವಾದ್ರಾ
Sumana Upadhyaya
Updated On : 9 Feb 2019, 12:52 pm
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ ರಾಬರ್ಟ್ ವಾದ್ರಾ ಶನಿವಾರ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ಕೇಂದ್ರ ದೆಹಲಿಯಲ್ಲಿ ಜಮ್ನಗರ್ ಹೌಸ್ ನಲ್ಲಿರುವ ಜಾರಿ ನಿರ್ದೇಶನಾಲಯದ ಮುಂದೆ ಇಂದು ಬೆಳಗ್ಗೆ 10.45ರ ಸುಮಾರಿಗೆ ತಮ್ಮ ಖಾಸಗಿ ವಾಹನದಲ್ಲಿ ಬಂದರು.
ವಿದೇಶದಲ್ಲಿ ಆಸ್ತಿ ಮತ್ತು ಮನೆ ಖರೀದಿ ಮಾಡುವಾಗ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಕೇಸಿಗೆ ಸಂಬಂಧಪಟ್ಟಂತೆ ವಾದ್ರಾ ಅವರು ಇನ್ನಷ್ಟು ಬಾರಿ ವಿಚಾರಣೆಗೆ ಹಾಜರಾಗಬೇಕಾಗಿ ಬರಬಹುದು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಫೆಬ್ರವರಿ 6 ಮತ್ತು 7ರಂದು ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.

Advertisement

Advertisement

ವಿಚಾರಣೆ ವೇಳೆ ವಾದ್ರಾ ಅವರು ನೀಡಿದ ಹೇಳಿಕೆಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರಡಿ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮೂಲಗಳು ತಿಳಿಸಿವೆ. ಇನ್ನೊಂದು ಅಕ್ರಮ ಹಣ ವರ್ಗಾವಣೆ ಕೇಸಿನ ವಿಚಾರಣೆಗೆ ಸಂಬಂಧಪಟ್ಟಂತೆ ಇದೇ 12ರಂದು ಜೈಪುರದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ವಾದ್ರಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments