ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ, ಹಿರಿಯ ಅಧಿಕಾರಿಗಳು ನಕಾರ
ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟ್ವಿಟ್ಟರ್ ಬಲ ಪಂಥೀಯರ ಖಾತೆಗಳ ಬಗ್ಗೆ ನಕಾರಾತ್ಮಕ ಧೋರಣೆ ಹೊಂದಿದೆ ಎಂಬ...
ನವದೆಹಲಿ: ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟ್ವಿಟ್ಟರ್ ಬಲ ಪಂಥೀಯರ ಖಾತೆಗಳ ಬಗ್ಗೆ ನಕಾರಾತ್ಮಕ ಧೋರಣೆ ಹೊಂದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ ಹಾಗೂ ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಶನಿವಾರ ಮೂಲಗಳು ತಿಳಿಸಿವೆ.
ಫೆಬ್ರವರಿ 1ರಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ನೇತೃತ್ವದ ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸಮಿತಿ, ಟ್ವಿಟ್ಟರ್ ಗೆ ಸಮನ್ಸ್ ಜಾರಿ ಮಾಡಿ, ಫೆಬ್ರವರಿ 11ಕ್ಕೆ ನಿಗದಿಯಾಗಿರುವ ಸಭೆಯಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗಲು 10 ದಿನ ಕಾಲವಕಾಶ ನೀಡಿದರೂ 'ಕಡಿಮೆ ಅವಧಿ'ಯ ಕಾರಣ ನೀಡಿ ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ ಸಂಸದೀಯ ಸಮಿತಿ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ್ದ ಟ್ವಿಟ್ಟರ್, ಬಲಪಂಥೀಯ ವಿರೋಧಿ ಧೋರಣೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ. ಮಾತುಕತೆ ಮುಗಿದ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಟ್ವಿಟ್ಟರ್ ಇಂಡಿಯಾ ವಕ್ತಾರರು ತಿಳಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.