ಶರದ್ ಪವಾರ್-ನಿತಿನ್ ಗಡ್ಕರಿ 
ದೇಶ

ನಿತಿನ್ ಗಡ್ಕರಿ ಬಗ್ಗೆ ನನಗೆ ಆತಂಕ ಇದೆ; ಶರದ್ ಪವಾರ್

ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ...

ಪುಣೆ: ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ತೋರಿಸಲಾಗುತ್ತಿರುವುದು ಆತಂಕ ತಂದಿದೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಉನ್ನತ ನಾಯಕರ ಬಗ್ಗೆ ನೀಡಿದ ಹೇಳಿಕೆಯಿಂದ ಬಿಜೆಪಿ ನಾಯಕ ಗಡ್ಕರಿ ಸುದ್ದಿಯಾಗಿದ್ದರು.
ಮಹಾರಾಷ್ಟ್ರದ ಸೊಲಾಪುರದಲ್ಲಿ  ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡ್ಕರಿ ನನ್ನ ಸ್ನೇಹಿತ. ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಮೋದಿಗೆ ಪರ್ಯಾಯವಾಗಿ ಪ್ರಧಾನಿ ಹುದ್ದೆಗೆ ಗಡ್ಕರಿ ಅವರ ಹೆಸರನ್ನು ಮುಂದೆ ತರಲಾಗುತ್ತಿದೆ ಇದು ನನಗೆ ಆತಂಕ ಉಂಟುಮಾಡಿದೆ ಎಂದರು.

ಲೋಕಸಭೆ ಚುನಾವಣೆಗೆ ಮಹಾಮೈತ್ರಿಯ ಬಗ್ಗೆ ಮಾತನಾಡಿದ ಪವರ್, ತಮ್ಮ ಪಕ್ಷ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ನೇತೃತ್ವದ ನವನಿರ್ಮಾಣ ಸೇನೆಯ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಾಜ್ ಠಾಕ್ರೆ ಯುವಕರಿಗೆ ಬೆಂಬಲ ನೀಡುತ್ತಾರೆ ಎಂದರು ಪವರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!