ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಯದಿಂದ ನನ್ನನ್ನು ತಡೆಯಲಾಗಿದೆ: ಯೋಗಿಗೆ ಅಖಿಲೇಶ್ ಯಾದವ್ ತಿರುಗೇಟು

ನಾನು ಅಲಹಬಾದ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದರಿಂದ ಹಿಂಸಾಚಾರ ಸಂಭವಿಸಬಹುದು ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್....

ಅಖಿಲೇಶ್ ಯಾದವ್
Lingaraj Badiger
Updated On : 12 Feb 2019, 5:06 am
ಲಖನೌ: ನಾನು ಅಲಹಬಾದ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದರಿಂದ ಹಿಂಸಾಚಾರ ಸಂಭವಿಸಬಹುದು ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ 'ಹೆದರಿಕೆ ಮರೆಮಾಚುವಂತಿದೆ' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಹೇಳಿದ್ದಾರೆ.
ವಿದ್ಯಾರ್ಥಿ ಘಟಕದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದ ವಿಚಾರದಲ್ಲಿ ಸರ್ಕಾರ ಭಯಭೀತಿಗೊಂಡಿದೆ. ಅದಕ್ಕಾಗಿಯೇ ನನ್ನನ್ನು ಏರ್​ಪೋರ್ಟ್​ನಲ್ಲಿ ತಡೆಯಲಾಗಿದೆ ಎಂದು ಅಖಿಲೇಶ್ ಯಾದವ್ ತಿರುಗೇಟು ನೀಡಿದ್ದಾರೆ.
ಯಾವುದೇ ಸ್ಪಷ್ಟ ಕಾರಣ ನೀಡದಯೇ ನಾನು ಅಲಹಬಾದ್ ವಿಮಾನ ಹತ್ತುವದನ್ನು ಪೊಲೀಸರು ತಡೆದರು. ಆದರೆ ಮುಖ್ಯಮಂತ್ರಿಗಳು ತಮ್ಮ ದುರ್ಬಲತೆಯನ್ನು ಮರೆಮಾಚಲು ಕಾನೂನು ಸುವ್ಯವಸ್ಥೆಗೆ ತಕ್ಕೆ ತರುವ ಸಾಧ್ಯತೆ ಇದೆ. ಹಿಂಸಾಚಾರ ನಡೆಯಬಹುದು ಎಂದು ಹೇಳಿರುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

Advertisement

Advertisement

ಬಿಜೆಪಿ ಉತ್ತರ ಪ್ರದೇಶವನ್ನು ಕಳೆದುಕೊಂಡಿದೆ. ಚುನಾವಣೆಗಿಂತ ಹೆಚ್ಚು, ಅವರು ಈ ದೇಶದ ಯುವಕರು ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದರು.
ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಮುಖಂಡನ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಅಖಿಲೇಶ್ ಯಾದವ್ ತೆರಳುತ್ತಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಪೊಲೀಸರು ಅವರನ್ನು ತಡೆದಿದ್ದು, ಈ ವಿಚಾರ ಇದೀಗ ಉತ್ತರ ಪ್ರದೇಶ ಮಾತ್ರವಲ್ಲದೇ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement