ದೇಶ

ಲೋಕಸಭಾ ಚುನಾವಣೆ: ಮಹಾಘಟಬಂಧನ್' ನಾಯಕ ಯಾರು, ಅಮಿತ್ ಶಾ ಪ್ರಶ್ನೆ

Nagaraja AB

ಅಹಮದಾಬಾದ್: ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ  ಮುಂಬರುವ ಲೋಕಸಭಾ ಚುನಾವಣೆ ಪ್ರಮುಖವಾದ ಹಂತವಾಗಿದ್ದು, ನರೇಂದ್ರ ಮೋದಿ ಅವರಿಗೆ ಜನತೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ,ರಾಜ್ಯಮಟ್ಟದ ನಾಯಕರೊಂದಿಗೆ ಮಹಾಮೈತ್ರಿ ಮಾಡಿಕೊಳ್ಳಲಾಗುತ್ತಿದೆ.ಇದರಿಂದ ಬಿಜೆಪಿಯ ಚುನಾವಣಾ ಆಶೋತ್ತರಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಪ್ರತಿಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಹಾಗೂ ಮಹಾಮೈತ್ರಿಯ ನಾಯಕರು ಯಾರು ಎಂಬುದನ್ನು ತಿಳಿಯಲು ಬಯಸುವುದಾಗಿ ಹೇಳಿದರು.

ಗುಜರಾತಿನಲ್ಲಿ 'ಮೇರಾ ಪರಿವಾರ್ ಬಾಜಪ ಪರಿವಾರ್ ' ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಬಹುಮತದ ಸರ್ಕಾರದ ಅಗತ್ಯವಾಗಿದೆ ಎಂದರು.

ಮಾಜಿ ಪ್ರಧಾನಿ ದೇವೇಗೌಡ ಗುಜರಾತಿನಲ್ಲಿ ಅಥವಾ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಾರಾಷ್ಟ್ರದಲ್ಲಿ, ಅಖಿಲೇಶ್ ಯಾದವ್ ಕೇರಳದಲ್ಲಿ ಭಾಷಣ ಮಾಡಿದ್ದರೆ ಏನು ಆಗುತ್ತದೆ ? ಅವರು ರಾಜ್ಯಮಟ್ಟದ ನಾಯಕರಾಗಿರುವುದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಇಂತಹ ರಾಜ್ಯಮಟ್ಟದ ನಾಯಕರ   ಬಗ್ಗೆ ಚಿಂತಿಸದೆ ಪಕ್ಷದ ಕಾರ್ಯಕರ್ತರು ಜನರ ಬಳಿ ತೆರಳಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮರಳಿ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕರೆ ನೀಡಿದರು.
SCROLL FOR NEXT