ಸಂಗ್ರಹ ಚಿತ್ರ 
ದೇಶ

ಮೋದಿ ಸರ್ಕಾರದ ವಿರುದ್ಧ ಮತ್ತೆ ಒಂದಾದ ವಿಪಕ್ಷಗಳು, ದೀದಿ ಪ್ರತಿಭಟನೆಗೆ ದೆಹಲಿಯಲ್ಲಿ ವೇದಿಕೆ ಸಜ್ಜು

ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ ದೆಹಲಿಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ನವದೆಹಲಿ: ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ ದೆಹಲಿಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಹೌದು ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಇಂದು ಜಂತರ್​​​ ಮಂತರ್ ​​ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದಾರೆ. ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸೇರಿದಂತೆ ಎಲ್ಲಾ ವಿಪಕ್ಷದ ನಾಯಕರು ಆಗಮಿಸಲಿದ್ದಾರೆ. ಅಲ್ಲದೇ ಈ ಬಾರಿ ಸಮಾವೇಶದ ಬೃಹತ್​​​ ರ‍್ಯಾಲಿಯನ್ನು ಸಿಎಂ ಅರವಿಂದ್​​ ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು, 'ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ದೇಶವನ್ನು ರಕ್ಷಿಸಲು​​​​​​ ಈ ಸಮಾವೇಶ ನಡೆಸುತ್ತಿದ್ದೇವೆ. ಸಂಯುಕ್ತ ಭಾರತ ಕಟ್ಟಲು ಮೈತ್ರಿಕೂಟ ಅತ್ಯಗತ್ಯ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲಿ ಕಾಂಗ್ರೆಸ್​​ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಶಕ್ತಿ ಪ್ರದರ್ಶನ ಮಾಡುತ್ತೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಎಲ್ಲದಕ್ಕೂ ಸಿದ್ದವಾಗಿದ್ದೇವೆ. ಈ ಬಾರಿ ಮೋದಿಯವರನ್ನು ಸೋಲಿಸಲು ಪಣತೊಟ್ಟಿದ್ದೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!