ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಬಾಲ ಬಿಚ್ಚಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೆಡೆ ಮುರಿಕಟ್ಟಿದ್ದು, ಎನ್ಕೌಂಟರ್ ನಲ್ಲಿ ಹತ್ಯೆಗೈದಿದೆ.
ಬದಗಾಮ್ ಜಿಲ್ಲೆಯ ಗೋಪಾಲಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸಿಆರ್ ಪಿಎಫ್ ಯೋದರು ಕೂಡಲೇ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿದ್ದಾರೆ. ಸೈನಿಕರು ಆಗಮಿಸುತ್ತಿದ್ದಂತೆಯೇ ಉಗ್ರರು ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಸೈನಿಕರೂ ಕೂಡ ಪ್ರತಿದಾಳಿ ನಡೆಸಿದ್ದಾರೆ.
ಈ ವೇಳೆ ಇಬ್ಬರು ಉಗ್ರರು ಸಾವನ್ನಪ್ಪಿದ್ದು ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಹೀಗಾಗಿ ಘಟನಾ ಪ್ರದೇಶದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
ಇನ್ನು ಕಳೆದ ಮೂರು ದಿನಗಳಲ್ಲಿ ಇದು ನಾಲ್ಕನೇ ಎನ್ಕೌಂಟರ್ ಆಗಿದ್ದು, ಒಟ್ಟು 8 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.