ಶಶಿ ತರೂರ್ 
ದೇಶ

ವ್ಯಾಲೆಂಟೈನ್ಸ್ ಡೇ- ಕಾಮದೇವ್ ದಿವಸ ಹೇಳಿಕೆ: ಶಶಿ ತರೂರ್ ಲವ್ ಗುರು-ಬಿಜೆಪಿ ಟೀಕೆ

ಪ್ರೇಮಿಗಳ ದಿನಾಚರಣೆ ಆಚರಿಸುವಾಗ ಸಂಘಪರಿವಾರ ವ್ಯಕ್ತಿಗಳು ಪ್ರೇಮಿಗಳನ್ನು ಟಾರ್ಗೆಟ್ ಮಾಡಿದರೇ, ನಾವು ಪುರಾತನ ಆಚರಣೆಯಾದ ಕಾಮದೇವ ದಿವಸವನ್ನು...

ನವದೆಹಲಿ: ವ್ಯಾಲೆಂಟೈನ್ಸ್ ಡೇ ಅನ್ನು ಶಾಂತಿಯುತವಾಗಿ ಆಚರಿಸಿಬೇಕೆಂದು ಕಾಂಗ್ರೆಸ್ ಸಂಸದ ಶಶಿ ತರೂರ್  ಕರೆ ನೀಡಿದ್ದಾರೆ.
ಇದೇ ವೇಳೆ ಪ್ರೇಮಿಗಳ ದಿನಾಚರಣೆ ಆಚರಿಸುವಾಗ ಸಂಘಪರಿವಾರ ವ್ಯಕ್ತಿಗಳು ಪ್ರೇಮಿಗಳನ್ನು ಟಾರ್ಗೆಟ್ ಮಾಡಿದರೇ, ನಾವು ಪುರಾತನ ಆಚರಣೆಯಾದ ಕಾಮದೇವ ದಿವಸವನ್ನು ಆಚರಿಸುತ್ತಿರುವುದಾಗಿ ಹೇಳಬೇಕೆಂದು ಶಶಿ ತರೂರ್ ಪ್ರೇಮಿಗಳಿಗೆ ಸಲಹೆ ನೀಡಿದ್ದಾರೆ.
ಶಶಿ ತರೂರ್ ಅವರು ಪ್ರೇಮಿಗಳಿಗೆ ನೀಡಿರುವ ಸಲಹೆಗೆ ಟಾಂಗ್ ನೀಡಿರುವ ಬಿಜೆಪಿ, ಶಶಿ ತರೂರ್ ಅವರನ್ನು ಲವ್ ಗುರು ಎಂದು ಕರೆದಿದ್ದಾರೆ, ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಕ್ವಿ, ತರೂರ್ ಲವ್ ಗುರು ಆಗಿದ್ದಾರೆ, ಒಂದು ವೇಳೆ ಪ್ರೇಮಿಗಳ ದಿನಾಚರಣೆ ಆಚರಿಸಲು ಯಾರಾದರೂ  ವಿರೋಧಿಸಿದರೇ ಅಂತವರ ವಿರುದ್ಧ ತರೂರ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ದೇಶಾದ್ಯಂತ ಪ್ರೇಮಿಗಳ ದಿನಾಚರಣೆ ಆಚರಿಸಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷದ್ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT