ನವದೆಹಲಿ: ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಭಯೋತ್ಪಾದರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ತಮ್ಮ ಭೂತಾನ್ ಭೇಟಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ.
ದಾಳಿಯ ಹಿನ್ನೆಲೆಯಲ್ಲಿ ಭಯೋತ್ಪಾದಕರ ವಿರುದ್ಧ ಕೈಗೊಳ್ಳಬೇಕಾದ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲು ನಾಳೆ ಭದ್ರತೆ ಮೇಲಿನ ಕ್ಯಾಬಿನೆಟ್ ಸಮಿತಿ ಸಭೆ ನಡೆಯಲಿದೆ. ಈ ನಡುವೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶೇಷ ಡಿಐಬಿ, ಗುಪ್ತಚರ ಇಲಾಖೆ ನಿರ್ದೇಶಕ ಹಾಗೂ ಎನ್ಎಸ್ಎ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿದ್ದಾರೆ.