ನವದೆಹಲಿ: ಪಾಕಿಸ್ತಾನ ಮೂಲದ ಜೈಸ್- ಇ- ಮೊಹಮಮ್ಮದ್ ಸಂಘಟನೆಯಿಂದ ಸಿಆರ್ ಪಿಎಫ್ ಯೋಧರ ಮೇಲೆ ನಡೆದಿರುವ ಭೀಕರ ದಾಳಿಯನ್ನು ಖಂಡಿಸಿ ಭಾರತದಲ್ಲಿನ ಪಾಕಿಸ್ತಾನ ಹೈಕಮೀಷನರ್ ಸೊಹೈಲ್ ಮೊಹಮ್ಮದ್ ಅವರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಸಮನ್ಸ್ ಜಾರಿ ಮಾಡಿದ್ದಾರೆ.
ಈ ಹೇಯಕೃತ್ಯವನ್ನು ಬಲವಾಗಿ ಖಂಡಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜೆಇಎಂ ವಿರುದ್ಧ ಪಾಕಿಸ್ತಾನ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಪಾಕಿಸ್ತಾನದ ನೆಲೆಯಿಂದ ಗುಂಪಾಗಿ ಅಥವಾ ವೈಯಕ್ತಿಕವಾಗಿ ಭಯೋತ್ಪಾದನೆ ಕೃತ್ಯವನ್ನು ತತ್ ಕ್ಷಣವೇ ನಿಲ್ಲಿಸಬೇಕೆಂದು ಸಮನ್ಸ್ ನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ ನಿನ್ನೆದಿನ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡಿರುವ ಹೇಳಿಕೆಯನ್ನು ಅವರು ತಿರಸ್ಕರಿಸಿದ್ದಾರೆ.
ಈ ಮಧ್ಯೆ ಜಾನ್ಸಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪುಲ್ವಾಮ ದಾಳಿಯಲ್ಲಿನ ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಭಾರತ ನವಭಾರತ ಎಂಬುದನ್ನು ನೆರೆಯ ರಾಷ್ಟ್ರ ಮೆರೆತಂದಿದೆ.
ಪಾಕಿಸ್ತಾನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಭಿಕ್ಷೆ ಬೇಡುವಂತಾಗಿದೆ ಎಂಬ ಸುದ್ದಿ ಹರಡಿದ್ದು, ವಿಶ್ವದ ಯಾವುದೇ ರಾಷ್ಟ್ರಗಳ ನೆರವು ನೀಡಲು ಮುಂದೆ ಬರುತ್ತಿಲ್ಲ ಎಂದು ಟೀಕಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics