ದೇಶ

ನಮ್ಮದು ನವ ಭಾರತ, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ

Lingaraj Badiger
ಧುಲೆ: ನಮ್ಮದು ಹೊಸ ನೀತಿಗಳೊಂದಿಗೆ ಹೊಸ ಭಾರತ. ಶೀಘ್ರದಲ್ಲೇ ಇದರ ಅನುಭವ ಜಗತ್ತಿಗೆ ಆಗಲಿದೆ. ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ್ದಾರೆ.
ಇಂದು ಮಹಾರಾಷ್ಟ್ರದ ಯವತ್ಮಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತ ವಿಭಜನೆ ನಂತರ ಅಸ್ತಿತ್ವಕ್ಕೆ ಬಂದ ದೇಶವು ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದೆ. ಇನ್ನೇನು ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನವು ಭಯೋತ್ಪಾದನೆಗೆ ಮತ್ತೊಂದು ಹೆಸರು ಎನ್ನುವಂತಾಗಿದೆ ಎಂದರು.
ಪುಲ್ವಾಮಾದಲ್ಲಿ ನಡೆದ ಭಯೋತ್ಪಾದನೆ ದಾಳಿಯಿಂದ ಇಡೀ ದೇಶ ತೀವ್ರ ನೋವಿನಲ್ಲಿದೆ. ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಬಲಿದಾನವನ್ನು ವ್ಯರ್ಥ ಆಗಲು ಬಿಡುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡುತ್ತೇವೆ ಎಂದರು.
ಪುಲ್ವಾಮ ಉಗ್ರ ದಾಳಿಯಲ್ಲಿ ಮಹಾರಾಷ್ಟ್ರದ ಇಬ್ಬರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ. ಯೋಧರ ಕುಟುಂಬದೊಂದಿಗೆ ನಾವಿದ್ದೇವೆ ಎಂದರು.
ನವ ಭಾರತ ಉಗ್ರರಿಗೆ ಗನ್ ಮತ್ತು ಬಾಂಬ್ ಗಳನ್ನು ನೀಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಪಾಕ್ ಗೆ ಎಚ್ಚರಿಕೆ ನೀಡಿದರು.
SCROLL FOR NEXT