ಮಸೂದ್ ಅಜರ್ 
ದೇಶ

ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಭಾರತಕ್ಕೆ ಅಮೆರಿಕಾ ಬೆಂಬಲ

ಜೈಶ್ ಎ ಮೊಹಮ್ಮದ್ ಸೇರಿದಂತೆ ಇತರ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಸುರಕ್ಷಿತ ತಾಣ...

ನವದೆಹಲಿ: ಜೈಶ್ ಎ ಮೊಹಮ್ಮದ್ ಸೇರಿದಂತೆ ಇತರ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಸುರಕ್ಷಿತ ತಾಣವಾಗಿದ್ದು, ಭಾರತದ ರಕ್ಷಣಾ ಹಕ್ಕುಗಳ ಹೋರಾಟಕ್ಕೆ ಕೈ ಜೋಡಿಸುವುದಾಗಿ ಅಮೆರಿಕಾ ಭರವಸೆ ನೀಡಿದೆ.

ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆಗೆ ಮಾತನಾಡಿದ ಅಮೆರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬಾಲ್ಟನ್, ವಿಶ್ವಸಂಸ್ಥೆಯ ನಿರ್ಣಯಗಳಡಿಯಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಲು ಇರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಜೈಶ್ ಎ ಮೊಹಮ್ಮದ್ ಸಂಘಟನೆಯ ನಾಯಕ ಮಸೂದ್ ಅಜರ್ ನನ್ನು ಜಾಗತಿಕ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
 
ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ಹತ್ತಿಕ್ಕಲು ಭಾರತಕ್ಕೆ ಎಲ್ಲಾ ರೀತಿಯ ರಕ್ಷಣಾ ಸಹಕಾರ ನೀಡಲು ನೆರವು ನೀಡುವುದಾಗಿ ಬಾಲ್ಟನ್ ಭರವಸೆ ನೀಡಿದ್ದು ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಅಗತ್ಯವನ್ನು ಕೂಡ ಇದೇ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪಾಕಿಸ್ತಾನ ಉಗ್ರಗಾಮಿಗಳಿಗೆ ಸುರಕ್ಷಿತ ತಾಣವಾಗುವುದನ್ನು ನಿಲ್ಲಿಸಬೇಕು ಎಂಬ ವಿಚಾರದಲ್ಲಿ ಅಮೆರಿಕಾ ಸ್ಪಷ್ಟವಾಗಿದ್ದು ಇದಕ್ಕೆ ಭಾರತಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT