ದೇಶ

ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿ ವಜಾ

Raghavendra Adiga
ನವದೆಹಲಿ: 3,600 ಕೋಟಿ ರೂ. ಅಗಾಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಸಂಬಂಧ  ಬಂಧಿಸಿರುವ ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.
ಕೇಂದ್ರೀಯ ತನಿಖಾ ದಳ ಹಾಗೂ ಜಾರಿ ನಿರ್ದೇಶನಾಲಯ ದಾಖಲಿಸಿದ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಮೈಕೆಲ್ ಅವರ ಅರ್ಜಿಯನ್ನು ವಜಾ ಮಾಡಿದ್ದಾರೆ.
ಕಳೆದ ವರ್ಷ ಡಿಸೆಂಬರ್ 22ರಂದು ದುಬೈನಿಂದ ಭಾರತಕ್ಕೆ ಹಸ್ತಾಂತರಿಸಲ್ಪಟ್ಟ ಅಗಾಸ್ತಾ ಹಗರಣದ ಮಧ್ಯವರ್ತಿ ಮೈಕೆಲ್ ನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.
ಜನವರಿ 5ರಂದು, ಇಡಿಯ ಪ್ರಕರಣದಲ್ಲಿ ಮೈಕೆಲ್ ನನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.ಹಗರಣಕ್ಕೆ ಸಂಬಂಧಿಸಿ ಸಿಬಿಐ ಸಹ ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ. ಹಗರಣದಲ್ಲಿನ ಮೂವರು ಪ್ರಮುಖ ಆರೋಪಿಗಳಲ್ಲಿ ಮೈಕೆಲ್ ಸಹ ಒಬ್ಬರಾಗಿದ್ದಾರೆ.
SCROLL FOR NEXT