ಕಚ್ಚಾಡಿಕೊಳ್ಳುತ್ತಿದ್ದ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಮೈತ್ರಿ, ಸ್ಥಾನ ಹಂಚಿಕೆ ಘೋಷಣೆ! 
ದೇಶ

ಕಚ್ಚಾಡಿಕೊಳ್ಳುತ್ತಿದ್ದ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಮೈತ್ರಿ, ಸ್ಥಾನ ಹಂಚಿಕೆ ಘೋಷಣೆ!

ಈ ವರೆಗೂ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದ ಬಿಜೆಪಿ-ಶಿವಸೇನೆ ಲೋಕಸಭಾ ಚುನಾವಣೆಗೆ ಮತ್ತೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆಯನ್ನೂ ಘೋಷಣೆ ಮಾಡಿವೆ.

ಮುಂಬೈ: ಈ ವರೆಗೂ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದ ಬಿಜೆಪಿ-ಶಿವಸೇನೆ ಲೋಕಸಭಾ ಚುನಾವಣೆಗೆ ಮತ್ತೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆಯನ್ನೂ ಘೋಷಣೆ ಮಾಡಿವೆ. 
ಫೆ.18 ರಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಲೋಕಸಭಾ ಚುನಾವಣೆ ಸಂಬಂಧ ನಡೆಸಿರುವ ಮಾತುಕತೆ ಯಶಸ್ವಿಯಾಗಿದ್ದು, ಬಿಜೆಪಿ ಮಹಾರಾಷ್ಟ್ರದಲ್ಲಿ 25 ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಶಿವಸೇನೆ 23 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. 
ಬಿಜೆಪಿ ಹಾಗೂ ಶಿವಸೇನೆಯ ಕೋಟ್ಯಂತರ ಕಾರ್ಯಕರ್ತರು ಉಭಯ ಪಕ್ಷಗಳ ನಡುವೆ ಮೈತ್ರಿಯನ್ನು ಬಯಸುತ್ತಿದ್ದರು. ಶಿವಸೇನೆ ಬಿಜೆಪಿಯ ಅತಿ ಹಳೆಯ ಮಿತ್ರ ಪಕ್ಷ ಎಂದು ಹೇಳಿದ್ದು ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಮಹಾರಾಷ್ಟ್ರದಲ್ಲಿ 45-48 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಇದೇ ವೇಳೆ ಮಾತನಾಡಿರುವ ಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ಶಿವಸೇನೆ ಸಮಾನ ಸಿದ್ಧಾಂತಗಳನ್ನು ಹೊಂದಿದ್ದು 2019 ರ ಲೋಕಸಭಾ ಚುನಾವಣೆ ವಿಧಾನಸಭಾ ಚುನಾವಣೆಯನ್ನು ಒಟ್ಟಿಗೆ ಎದುರಿಸಲಿವೆ. ಬಿಜೆಪಿ ಹಾಗೂ ಶಿವಸೇನೆ ರಾಮಮಂದಿರ ವಿಚಾರದಲ್ಲಿ ಸಮಾನಮನಸ್ಕ ಪಕ್ಷಗಳಾಗಿದ್ದು ರಾಮಮಂದಿರ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿವೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!