ಪುಲ್ವಾಮಾ ಎನ್ ಕೌಂಟರ್: ಉನ್ನತ ಪೋಲೀಸ್ ಅಧಿಕಾರಿ ಅಮಿತ್ ಕುಮಾರ್ ಗೆ ಗಾಯ 
ದೇಶ

ಪುಲ್ವಾಮಾ ಎನ್ ಕೌಂಟರ್: ಉನ್ನತ ಪೋಲೀಸ್ ಅಧಿಕಾರಿ ಅಮಿತ್ ಕುಮಾರ್ ಗೆ ಗಾಯ

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್ ಕೌಂಟರ್ ಮುಂದುವರಿದಿದೆ. ಈ ವೇಳೆ ದಕ್ಷಿಣ ಕಾಶ್ಮೀರ ಡಿಐಜಿ ಅಮಿತ್ ಕುಮಾರ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ.

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್ ಕೌಂಟರ್ ಮುಂದುವರಿದಿದೆ. ಈ ವೇಳೆ ದಕ್ಷಿಣ ಕಾಶ್ಮೀರ ಡಿಐಜಿ ಅಮಿತ್ ಕುಮಾರ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಕುಮಾರ್ ಅವರ ಕಾಲಿಗೆ ಬುಲೆಟ್ ತಾಕಿ ಗಾಯಗಳಾಗಿದೆ. ಅವರನ್ನು ತಕ್ಷಣ ಸೈನ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಇನ್ನು ಎನ್ ಕೌಂಟರ್ ನಲ್ಲಿ ಓರ್ವ ಲೆಫ್ಟಿನೆಂಟ್ ಕರ್ನಲ್ ಮತ್ತು ಕ್ಯಾಪ್ಟನ್ ಕೂಡ ಗಾಯಗೊಂಡಿದ್ದಾರೆ, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಕಳೆದ ಗುರುವಾರ ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ನಲವತ್ತಕ್ಕೆ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ಸುತ್ತಲ ಪ್ರದೇಶದಲ್ಲಿ ಉಗ್ರಗಾಮಿಗಳ ಉಪಸ್ಥಿತಿ ಬಗ್ಗೆ ಮಾಹಿತಿ ಪಡೆದ ನಂತರ ನಿನ್ನೆ ತಡರಾತ್ರಿಯಿಂದ ಎನ್ ಕೌಂಟರ್ ಕಾರ್ಯಾಚರಣೆ ಪ್ರಾರಂಭವಾಗಿದೆ.ಇದುವರೆಗೆ ಮೊನ್ನಿನ ದಾಳಿಯ ಮಾಸ್ಟರ್ ಮೈಡ್ ಸೇರಿ ಏಳು ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT