ಸಂಗ್ರಹ ಚಿತ್ರ 
ದೇಶ

ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಇಮ್ರಾನ್‍ಗೆ ಸಲಹೆ ನೀಡಿ: ಸಿಧುಗೆ ದಿಗ್ವಿಜಯ್ ಕಿವಿಮಾತು

ಭಾರತದ ಮೇಲಿನ ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಗೆಳೆಯ ಇಮ್ರಾನ್ ಖಾನ್‍ಗೆ ಸಲಹೆ ನೀಡುವಂತೆ ತಮ್ಮದೇ ಪಕ್ಷದ ಸಿಧುಗೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕಿವಿಮಾತು ಹೇಳಿದ್ದಾರೆ.

ನವದೆಹಲಿ: ಭಾರತದ ಮೇಲಿನ ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಗೆಳೆಯ ಇಮ್ರಾನ್ ಖಾನ್‍ಗೆ ಸಲಹೆ ನೀಡುವಂತೆ ತಮ್ಮದೇ ಪಕ್ಷದ  ಸಿಧುಗೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕಿವಿಮಾತು ಹೇಳಿದ್ದಾರೆ.

“ಪಾಕಿಸ್ತಾನದ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ದಿಟ್ಟತನ ಪ್ರದರ್ಶಿಸುವ ಸಮಯ ಬಂದಿದ್ದು, ಉಗ್ರರನ್ನು ಮಟ್ಟ ಹಾಕಬೇಕು. ಹಫೀಜ್ ಸಯೀದ್, ಮಸೂದ್ ಅಜರ್ ಮೊದಲಾದ ದಾಳಿ ಸಂಚು ರೂಪಿಸಿರುವ ದುಷ್ಕರ್ಮಿಗಳನ್ನು ಭಾರತಕ್ಕೆ ಒಪ್ಪಿಸಬೇಕು. ಈ ಬಗ್ಗೆ ಸಲಹೆ ನೀಡಿ” ಎಂದು ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.
ಮುಂದಿನ ಹತ್ತು ವರ್ಷಗಳಲ್ಲಿ ಕಾಶ್ಮೀರಿ ಮುಸ್ಲಿಮ್ ಹಾಗೂ ಕಾಶ್ಮೀರಿ ಪಂಡಿತರ ನಡುವೆ ಸೋದರ ಭಾವ ಮೂಡಲು ಬೇಕಾದ ನಕ್ಷೆ ರೂಪಿಸುವಂತೆ ಬಿಜೆಪಿ, ಕಾಂಗ್ರೆಸ್, ಪಿಡಿಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರಲ್ಲಿ  ದಿಗ್ವಿಜಯ್ ಸಿಂಗ್ ಮನವಿ ಮಾಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರು ಕಾಲೆಳೆದರೂ ಪರವಾಗಿಲ್ಲ. ಐಎಸ್‍ಐ ಪ್ರಾಯೋಜಿತ ಉಗ್ರ ಸಂಘಟನೆಗಳು ಮತ್ತು ಮುಸ್ಲಿಂ ಮೂಲಭೂತವಾದಿಗಳನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪರಿಗಣನೆಗೆ ತೆಗೆದುಕೊಂಡಿದ್ದಾರೆ ಎಂಬುದನ್ನು ನಂಬುವುದಿಲ್ಲ”ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್