ನಿರ್ಮಲಾ ಸೀತಾರಾಮನ್ 
ದೇಶ

26/11 ನಿಂದಲೂ ಭಾರತ ಸಾಕ್ಷ್ಯಗಳನ್ನು ನೀಡುತ್ತಲೇ ಇದೆ, ಆದ್ರೆ ಪಾಕ್ ಯಾವ ಕ್ರಮ ತೆಗೆದುಕೊಂಡಿದೆ?: ನಿರ್ಮಲಾ ಸೀತಾರಾಮನ್

ಪುಲ್ವಾಮ ಉಗ್ರ ದಾಳಿಯ ಬಗ್ಗೆ ಸಾಕ್ಷ್ಯ ಕೇಳಿದ ಪಾಕಿಸ್ತಾನವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು...

ಬೆಂಗಳೂರು: ಪುಲ್ವಾಮ ಉಗ್ರ ದಾಳಿಯ ಬಗ್ಗೆ ಸಾಕ್ಷ್ಯ ಕೇಳಿದ ಪಾಕಿಸ್ತಾನವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಮುಂಬೈ ದಾಳಿಯಿಂದಲೂ ಸಾಕ್ಷ್ಯಗಳನ್ನು ನೀಡುತ್ತಲೇ ಬಂದಿದ್ದೇವೆ. ಆದರೆ ಪಾಕ್ ಯಾವ ಕ್ರಮ ತೆಗೆದುಕೊಂಡಿದೆ ಎಂದು ಮಂಗಳವಾರ ಪ್ರಶ್ನಿಸಿದರು. 
ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವೆ, ನಮ್ಮ ಸರ್ಕಾರ ಮಾತ್ರವಲ್ಲ. ಹಿಂದಿನ ಸರ್ಕಾರ ಸಹ 26/11 ನಿಂದಲೂ ದಾಖಲೆಗಳು, ಹಲವು ಸಾಕ್ಷ್ಯಗಳನ್ನು ನೀಡಿದ್ದೇವೆ. ಆದರೆ ಪಾಕಿಸ್ತಾನ ಯಾವ ಕ್ರಮ ತೆಗೆದುಕೊಂಡಿದೆ? ಎಂದರು.
ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್‌ ಅವರು, 'ಘಟನೆಯ ತನಿಖೆ ಪ್ರಗತಿಯಲ್ಲಿದೆ. ದೇಶದಲ್ಲಿ ಮುಂಬೈ ದಾಳಿಯಿಂದ ಇಲ್ಲಿಯವರೆಗೆ ಉಗ್ರರು ನಡೆಸಿರುವ ಎಲ್ಲಾ ದಾಳಿಗಳ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ನೀಡಿದರೂ ಪಾಕಿಸ್ತಾನ ಏನು ಕ್ರಮ ಕೈಗೊಂಡಿದೆ,' ಎಂದು ಪ್ರಶ್ನಿಸಿದರು. 
ಪುಲ್ವಾಮಾ ದಾಳಿ ಯಾರೂ ಊಹಿಸದಂಥ ಘಟನೆ. ಅದರ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡಲು ಸಾಧ್ಯವಿಲ್ಲ. ನಮ್ಮದೇ ರೀತಿಯಲ್ಲಿ ಪ್ಲಾನ್‌ ಮಾಡುತ್ತಿದ್ದೇವೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು. 
'ಉಗ್ರರ ದಮನಕ್ಕಾಗಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಉಗ್ರರನ್ನು ದಮನ ಮಾಡುವ ಕಾರ್ಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಉಗ್ರರ ವಿರುದ್ಧದ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಳ್ಳಲಿದೆ' ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ