ದೇಶ

ಪುಲ್ವಾಮಾ ಉಗ್ರ ದಾಳಿ: ಎನ್ಐಎ ತನಿಖೆ ಆರಂಭ, ಪೊಲೀಸ್, ಸೇನೆ, ಗುಪ್ತಚರ ಇಲಾಖೆ ಸಹಕಾರ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬುಧವಾರ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರ ದಾಳಿಗೆ ಸಂಬಂಧಿಸಿದಂತೆ ಎನ್‌ಐಎ ಕೇಸ್ ಮರು ದಾಖಲಿಸಿಕೊಂಡಿದ್ದು, ತನಿಖಾ ತಂಡವನ್ನು ರಚಿಸಿದೆ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ.
ಫೆಬ್ರವರಿ 14ರಂದು 40 ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಅವಂತಿಪೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈಗ ಅದನ್ನು ಎನ್ಐಎಗೆ ವರ್ಗಾಯಿಸಲಾಗಿದೆ. ಹೀಗಾಗಿ ಎನ್ಐಎ ತನಿಖೆಗೆ ಪೊಲೀಸರು, ಸೇನೆ ಹಾಗೂ ಗುಪ್ತಚರ ಇಲಾಖೆ ಸಹಾಯ ಮಾಡಲಿವೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಎನ್ಐಎ ಸ್ಫೋಟ ನಡೆದ ಲೆತಪೋರಾಗೆ ಭೇಟಿ ನೀಡಿದ್ದ, ಸ್ಫೋಟಕ ವಸ್ತಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೆ ಈ ಸಂಬಂಧ ಡಜನ್ ಗೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ವಕ್ತಾರರು ಹೇಳಿದ್ದಾರೆ.
SCROLL FOR NEXT