ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ! 
ದೇಶ

ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ!

ದೇಶಾದ್ಯಂತ ಕಾಡುಗಳಲ್ಲಿ ವಾಸಿಸುವ ಹತ್ತು ಲಕ್ಷಕ್ಕೂ ಹೆಚ್ಚಿನ ಬುಡಕಟ್ಟು ಮತ್ತು ಆದಿವಾಸಿ ಕುಟುಂಬಗಳನ್ನು ಕಾಡಿನಿಂಡ ಹೊರಹಾಕಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.

ನವದೆಹಲಿ: ದೇಶಾದ್ಯಂತ ಕಾಡುಗಳಲ್ಲಿ ವಾಸಿಸುವ ಹತ್ತು ಲಕ್ಷಕ್ಕೂ ಹೆಚ್ಚಿನ ಬುಡಕಟ್ಟು ಮತ್ತು ಆದಿವಾಸಿ ಕುಟುಂಬಗಳನ್ನು ಕಾಡಿನಿಂಡ ಹೊರಹಾಕಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.
ಸುಪ್ರೀಂ ಕೋರ್ಟ್ ಗೆ ರಾಜ್ಯಗಳು ಸಲ್ಲಿಸಿದ್ದ ಅಫಿಡವಿಟ್ ನ ವಿಚಾರಣೆ ನಡೆಸಿದ ನ್ಯಾಯಾಲಯ  ಸುಮಾರು 11,72,931 ಪರಿಶಿಷ್ಟ ಪಂಗಡ, ಇತರೆ ಬುಡಕಟ್ಟು ಅರಣ್ಯ ನಿವಾಸಿಗಳ  ಭೂ ಮಾಲೀಕತ್ವ ಹಕ್ಕುಗಳನ್ನು ತಿರಸ್ಕರಿಸಿದೆ.
ಅರಣ್ಯ ಹಕ್ಕು ಕಾಯ್ದೆಯ ಅನುಸಾರ 31 ಡಿಸೆಂಬರ್ 2005ಕ್ಕಿಂತ ಮುನ್ನ  ಕನಿಷ್ಠ ಮೂರು ತಲೆಮಾರುಗಳಿಂದ ಕಾಡಿನಲ್ಲಿ ವಾಸವಿರುವವರು ಮಾತ್ರವೇ ಭೂಮಿ ಹಕ್ಕುಗಳಿಗೆ ಅರ್ಹರಾಗಿದ್ದಾರೆ.
ಶುಕ್ರವಾರ ನೀಡಿದ ಆದೇಶದಲ್ಲಿ ನ್ಯಾಯಾಲಯವು  17 ರಾಜ್ಯ ಸರ್ಕಾರಗಳಿಗೆ ಬರುವ ಜುಲೈ 12ರೊಳಗೆ ತಮ್ಮ ವ್ಯಾಪ್ತಿಯಲ್ಲಿನ ಅರಣ್ಯದಲ್ಲಿ ವಾಸವಿರುವ ಆದಿವಾಸಿ, ಬುಡಕಟ್ಟು ಸಮುದಾಯದವರನ್ನು ತೆರವುಗೊಳಿಸುವ ಪ್ರಕ್ರಿಯೆ ಮುಕ್ತಾಯಗೊಳಿಸಲು ಹೇಳಿದೆ. ಅಲ್ಲದೆ ಒಮ್ಮೆ ಹೀಗೆ ಅವರನ್ನು ಒಕ್ಕಲೆಬ್ಬಿಸಿದ ನಂತರ ಒಂದು ಉಪಗ್ರಹದಾಧಾರಿತ ಚಿತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಫಾರೆಸ್ಟ್ ಸರ್ವೆ ಆಫ್ ಇಂಡಿಯಾಗೆ ಕೋರ್ಟ್ ನಿರ್ದೇಶಿಸಿದೆ.
ಗಮನಾರ್ಹ ಸಂಗತಿ ಎಂದರೆ ಒಟ್ಟು 17 ರಾಜ್ಯಗಳ ಪೈಕಿಶೇ. 20 ಅರಣ್ಯ ವಾಸಿಗಳು ಮಧ್ಯ ಪ್ರದೇಶ, ಕರ್ನಾಟಕಮತ್ತು ಒಡಿಶಾ ರಾಜ್ಯಗಳಲ್ಲಿದ್ದಾರೆ.  ಇವರು ತಾವು ವಾಸಿಸುವ ಭೂಮಿಯ ಹಕ್ಕು ತಮಗೆ ಸಿಗಬೇಕೆಂದು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT