ಸ್ಫೋಟಗೊಂಡ ಕಾರ್ಪೆಟ್ ಕಾರ್ಖಾನೆ 
ದೇಶ

ಉತ್ತರ ಪ್ರದೇಶ: ಕಾರ್ಪೆಟ್ ಕಾರ್ಖಾನೆಯಲ್ಲಿ ಸ್ಫೋಟ, 13 ಮಂದಿ ಸಾವು

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಕಾರ್ಪೆಟ್ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 10 ಮಂದಿ ಮೃತಪಟ್ಟಿರುವ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದೋಹಿ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಕಾರ್ಪೆಟ್ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 13 ಮಂದಿ ಮೃತಪಟ್ಟಿರುವ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದೋಹಿ ಜಿಲ್ಲೆಯ ಕಲಿಯಾರ್ ಮನ್ಸೂರಿಯ ರೊಹ್ಟಾ ಬಜಾರ್ ನಲ್ಲಿರುವ ಅಂಗಡಿಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನು ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ಕಾರ್ಖಾನೆಯಲ್ಲಿ ಮೊದಲು ಪಟಾಕಿಗಳನ್ನು ತಯಾರಿಸಲಾಗಿತ್ತಿತ್ತು. ಹೀಗಾಗಿ ಒಂದಷ್ಟು ಪಟಾಕಿಗಳನ್ನು ಕಟ್ಟಡ ಒಳಭಾಗದಲ್ಲಿ ಸಂಗ್ರಹಿಸಲಾಗಿತ್ತು. ಅವುಗಳಿಂದ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT