ರಾಹುಲ್ ಗಾಂಧಿ 
ದೇಶ

ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ - ರಾಹುಲ್ ಗಾಂಧಿ

ದೇಶದಲ್ಲಿನ ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಈ ವಿಚಾರವಾಗಿ ಯುವಜನಾಂಗದ ಜೊತೆ ಪ್ರಧಾನಿ ಚರ್ಚೆ ನಡೆಸಬೇಕು ಎಂದಿದ್ದಾರೆ.

ನವದೆಹಲಿ: ದೇಶದಲ್ಲಿನ ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಈ ವಿಚಾರವಾಗಿ ಯುವಜನಾಂಗದ ಜೊತೆ ಪ್ರಧಾನಿ ಚರ್ಚೆ ನಡೆಸಬೇಕು ಎಂದಿದ್ದಾರೆ.

ಜವಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಾ, ದಶಾ ಮತ್ತು ದಿಶಾ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ದೇಶದ ಸಂಪತ್ತು ಕೆಲವೇ ಜನರ ಕೈಯಲ್ಲಿ ಕೇಂದ್ರೀಕೃತವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಶಿಕ್ಷಣದ ಹೆಚ್ಚಿನ ಭಾಗವನ್ನು ರಾಜ್ಯವು ಪಾವತಿಸಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥರು ಪ್ರತಿಪಾದಿಸಿದ್ದಾರೆ. ಆದರೆ, ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಕಂಡುಬಂದಿಲ್ಲ

ಚೀನಾ ಆರ್ಥಿಕವಾಗಿ ಪ್ರಗತಿ ಹೊಂದುತ್ತಲೇ ಇದ್ದು, ದೇಶದಲ್ಲಿನ ಹಲವು ಉತ್ಪನ್ನಗಳ ಮೇಲೆ ಮೇಡ್ ಇನ್ ಚೀನಾ ಲೇಬಲ್ ಕಂಡುಬರುತ್ತದೆ. ಭಾರತವು ಚೀನಾವನ್ನು ಹಿಂದಿಕ್ಕೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಮನವರಿಕೆ ಮಾಡಿಕೊಟ್ಟರು.

ದೇಶದಲ್ಲಿ 1. 2 ಬಿಲಿಯನ್ ಜನರಿದ್ದು, ಭಾರತ 24 ಗಂಟೆಗೆ 450 ಉದ್ಯೋಗವನ್ನು ಸೃಷ್ಟಿಸಿದ್ದರೆ ಚೀನಾ ಇದೇ ಅವಧಿಯಲ್ಲಿ 50 ಸಾವಿರ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಇದು ತಮ್ಮ ಅಂಕಿ ಅಂಶವಲ್ಲಾ, ವಿತ್ತ ಸಚಿವಾಲಯ ಲೋಕಸಭೆಗೆ ನೀಡಿದ ಮಾಹಿತಿಯಾಗಿದೆ. ಆದರೆ, ಈ ಸಮಸ್ಯೆಯನ್ನು ಬಗೆಹರಿಸಲು ಪ್ರಧಾನಿ ಮೋದಿ ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.

ಏಲ್ಲಿ ಸಮಸ್ಯೆ ಇದೆಯೋ  ಅದನ್ನು ಬಗೆಹರಿಸಲು ಬೆಂಬಲ ನೀಡಬೇಕಾಗುತ್ತದೆ. ಕಾಂಗ್ರೆಸ್ ಅದರಲ್ಲಿ ನಂಬಿಕೆ ಹೊಂದಿದೆ. ರಾಫೆಲ್ ವಿವಾದ, ಭ್ರಷ್ಟಾಚಾರ, ಉದ್ಯೋಗ ಮತ್ತಿತರ ವಿಷಯಗಳ ಕುರಿತ ಚರ್ಚೆಗೆ ಪ್ರಧಾನಿ ಮೋದಿಗೆ ಈಗಾಗಲೇ ಸವಾಲು ಹಾಕಿರುವುದಾಗಿ ರಾಹುಲ್ ಗಾಂಧಿ ಹೇಳಿದರು.

ದೇಶದಲ್ಲಿನ ನಿರುದ್ಯೋಗ ಸಮಸ್ಯೆ ಕುರಿತಂತೆ ಪ್ರಧಾನಿ ಮೋದಿ, ಯುವಜನಾಂಗದೊಂದಿಗೆ ಸಂವಾದ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸಬೇಕಾಗಿದೆ. ಈ ವಿಚಾರದಲ್ಲಿ ಚರ್ಚೆ ನಡೆದರೆ ಅಗತ್ಯ ಬೆಂಬಲ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್