ದೇಶ

ಗೋವಾ ಸಿಎಂ ಮನೋಹರ್ ಪರ್ರಿಕರ್ ಮತ್ತೆ ಆಸ್ಪತ್ರೆಗೆ ದಾಖಲು

Sumana Upadhyaya
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಮತ್ತೆ ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋವಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಹರ್ ಪರ್ರಿಕರ್ ಎಂಡೋಸ್ಕೋಪಿಗೆ ಒಳಗಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.
63 ವರ್ಷದ ಪರ್ರಿಕರ್ ಅವರನ್ನು 48 ಗಂಟೆಗಳ ಕಾಲ ನಿಗಾವಹಿಸಲಾಗುವುದು ಎಂದು ಕಾರ್ಯಾಲಯ ತಿಳಿಸಿದೆ.ಆಸ್ಪತ್ರೆಯ ಹೊರಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
SCROLL FOR NEXT