ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರ 
ದೇಶ

2015, 2016, 2017 ಮತ್ತು 2018ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ

2015, 2016, 2017 ಮತ್ತು 18ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ನವದೆಹಲಿ:  2015, 2016, 2017 ಮತ್ತು 18ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ  ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರ 2015ನೇ ಸಾಲಿನ ಹಾಗೂ ಅಕ್ಷಯ ಪಾತ್ರಾ ಫೌಂಡೇಶನ್ ಮತ್ತು ಸುಲಭ್ ಇಂಟರ್ ನ್ಯಾಷನಲ್‍ ಸಂಸ್ಥೆಗಳು ಜಂಟಿಯಾಗಿ 2016ನೇ ಸಾಲಿನ ಪ್ರಶಸ್ತಿ ಸ್ವೀಕರಿಸಿದವು.ಏಕಲ್ ಅಭಿಯಾನ ಟ್ರಸ್ಟ್ 2017ನೇ ಸಾಲಿನ ಪ್ರಶಸ್ತಿ ಹಾಗೂ ಯೋಹಿ ಸಸಾಕಾವಾ 2018ನೇ ಗಾಂಧಿ ಶಾಂತಿ ಪ್ರಶಸ್ತಿ ಮುಡಿಗೇರಿಸಿಕೊಂಡರು.
 ಈ ಹಿಂದೆ ತಾಂಜೇನಿಯಾದ ಮಾಜಿ ಅಧ್ಯಕ್ಷ ಡಾ. ಜೂಲಿಯಸ್ ಕೆ. ನ್ಯೆರೆರೆ, ಶ್ರೀಲಂಕಾದ ಸರ್ವೋದಯ ಮೂವ್‍ಮೆಂಟ್‍ನ ಸಂಸ್ಥಾಪಕ ಅಧ್ಯಕ್ಷ ಡಾ. ಎ.ಟಿ. ಅರಿಯರತ್ನೆ, ರಾಮ ಕೃಷ್ಣ ಮಿಷನ್, ಬಾಬಾ ಆಮ್ಟೆ (ಮುರಳೀಧರ್ ದೇವಿದಾಸ್ ಆಮ್ಟೆ), ಡಾ. ನೆಲ್ಸನ್ ಮಂಡೇಲಾ ಮತ್ತು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್ (ಜಂಟಿಯಾಗಿ), ಭಾರತೀಯ ವಿದ್ಯಾ ಭವನ, ಆರ್ಚ್ ಬಿಷಪ್ ಡೆಸ್ಮಂಡ್ ಟುಟು, ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳು ಪ್ರಶಸ್ತಿಗೆ ಭಾಜನವಾಗಿವೆ.
ಈ ಪ್ರಶಸ್ತಿಯನ್ನು 2004, 2006, 2007, 2008, 2009, 2010, 2011 ಮತ್ತು 2012 ರವರೆಗೆ ನೀಡಲಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್