ನವದೆಹಲಿ: ಪುಲ್ವಾಮಾದಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ದಾಳಿ ನಡೆದು 12 ದಿನಗಳ ನಂತರ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ವಾಯುದಾಳಿ ನಡೆಸಿದೆ ಎಂಬ ಬಗ್ಗೆ ವರದಿಗಳು ಬರುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತೀಯ ವಾಯುಪಡೆಗೆ ಅಭಿನಂದನೆ ಹೇಳಿದ್ದಾರೆ.
ಇಂದು ನಸುಕಿನ ಜಾವ ಭಾರತೀಯ ವಾಯುಸೇನೆ ಪಾಕಿಸ್ತಾನ ಗಡಿಭಾಗದಲ್ಲಿ ವಾಯುದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆಯಾದರೂ ಭಾರತೀಯ ಸೇನೆಯಿಂದಾಗಲಿ, ಸರ್ಕಾರದಿಂದಾಗಲಿ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.