ನರೇಂದ್ರ ಮೋದಿ 
ದೇಶ

ಲೋಕಸಮರಕ್ಕೆ ಸಮೀಪದಲ್ಲೇ ಬಿಜೆಪಿಗೆ ವೈಮಾನಿಕ ದಾಳಿಯಿಂದ ಮರುಜೀವ !

ಪುಲ್ವಾಮಾ ಉಗ್ರ ದಾಳಿಯ ನಂತರ ತೀವ್ರ ಒತ್ತಡಕ್ಕೆ ಸಿಲುಕಿದ್ದ ಬಿಜೆಪಿಯ ಆತ್ಮವಿಶ್ವಾಸ ವೈಮಾನಿಕ ದಾಳಿಯ ನಂತರ ಇಮ್ಮಡಿಗೊಂಡಿದೆ....

ನವದೆಹಲಿ: ಪುಲ್ವಾಮಾ ಉಗ್ರ ದಾಳಿಯ ನಂತರ ತೀವ್ರ ಒತ್ತಡಕ್ಕೆ ಸಿಲುಕಿದ್ದ ಬಿಜೆಪಿಯ ಆತ್ಮವಿಶ್ವಾಸ ವೈಮಾನಿಕ ದಾಳಿಯ ನಂತರ  ಇಮ್ಮಡಿಗೊಂಡಿದೆ.
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆಯೇ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು. 
ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ ಪುಲ್ವಾಮಾ ಉಗ್ರರ ದಾಳಿ ಬಿಜೆಪಿಗೆ ಆಘಾತ ಉಂಟು ಮಾಡಿತ್ತು.  
ಬಿಜೆಪಿ ಚಾಣಾಕ್ಯ ಅಮಿತ್ ಶಾ ಬುಧವಾರ ತಮ್ಮ ಆಪ್ತರ ಜೊತೆ ಸಭೆ ನಡೆಸಲಿದ್ದಾರೆ, ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ, 
ಈಗ ನಡೆದಿರುವ ವೈಮಾನಿಕ ದಾಳಿಯಿಂದ ಪಾಕಿಸ್ತಾನದಲ್ಲಿ ಮೋದಿ ಬಗ್ಗೆ ಭಾರೀ ಭಯ ವ್ಯಕ್ತವಾಗಿದೆ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ದೃಡ ನಾಯಕತ್ವ ವಿಷಯವನ್ನು ಮುಂದಿಟ್ಟುಕೊಂಡು  ಬಿಜೆಪಿ 2019ರ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧವಾಗುತ್ತಿದೆ, ಪಾಕಿಸ್ತಾನ ವಿರುದ್ಧ ದೇಶದ ಜನರಲ್ಲಿ ಮಡುಗಟ್ಟಿರುವ ಆಕ್ರೋಶವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಬಿಜೆಪಿ ತಂತ್ರವಾಗಿದೆ  ಹೀಗಾಗಿ ವೈಮಾನಿಕ ದಾಳಿಯ ನಂತರ ಬಿಜೆಪಿ ಮತ್ತೆ ರಾಷ್ಟ್ರೀಯತೆ ಮಂತ್ರ ಪಠಿಸುತ್ತಿದೆ.
ಇದೆಲ್ಲದರ ನಡುವೆಯೂ ದೇಶದಲ್ಲಿ ನಿರುದ್ಯೋಗ, ಕೃಷಿಕರ ಸಮಸ್ಯೆಗಳು ಬಿಜೆಪಿ ಬೆನ್ನಿಗೆ ತಾಗಿ ನಿಂತಿವೆ, ಇದೆಲ್ಲಾದರ ನಡುವೆ ಮೋದಿ ಬ್ರಾಂಡ್ ಹೇಗೆ ಕೆಲಸ ನಿರ್ವಹಿಸಲಿದೆ ಎಂಬುದನ್ನು ಕಾದು ನೋಡಬೇಕು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ