ಸಂಗ್ರಹ ಚಿತ್ರ 
ದೇಶ

ಗಡಿದಾಟಿ ಬಂದಿದ್ದ ಪಾಕ್ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತೀಯ ಸೇನೆ!

ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ 3 ಪಾಕಿಸ್ತಾನದ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.

ನವದೆಹಲಿ: ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ ಪಾಕಿಸ್ತಾನದ ಎಫ್-16 ವಿಮಾನವನ್ನು ಹೊಡೆದುರುಳಿಸಿದ್ದು ಪ್ಯಾರಶೂಟ್ ಬಳಸಿ ಕೆಳಗೆ ಹಾರಿರುವುದಾಗಿ ವರದಿಯಾಗಿದೆ.
ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದೆ ಎಂದು ವರದಿ ಹೇಳಿದೆ.
ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿಯ ನೌಶೇರ್ ಸೆಕ್ಟರ್ ಬಳಿ ವಾಯುಸೀಮೆಯನ್ನು ಉಲ್ಲಂಘಿಸಿ ಪಾಕಿಸ್ತಾನದ ಮೂರು ಜೆಟ್ ವಿಮಾನಗಳು ದಾಳಿ ನಡೆಸಲು ವಿಫಲ ಪ್ರಯತ್ನ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ. ಏತನ್ಮಧ್ಯೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಗಡಿಯಲ್ಲಿ ಯುದ್ಧ ವಾತಾವರಣ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಠಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ವಿಮಾನ ನಿಲ್ದಾಣ ಸ್ಧಗಿತಗೊಳಿಸಲಾಗಿದ್ದು ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದ್ದು ಎಲ್ಲಾ ವಿಮಾನಗಳು ದೆಹಲಿಗೆ ವಾಪಸ್ ಆಗಿವೆ ಎಂದು ವರದಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!