ಭಾರತೀಯ ವಾಯುಪಡೆಯ ಮಿಗ್ 21 ಪತನ; ಇಬ್ಬರು ಪೈಲಟ್ ಸಾವು
ಜಮ್ಮು ಕಾಶ್ಮೀರದ ಬುದ್ಗಾಮ್ ನಲ್ಲಿ ವಾಯುಸೇನೆಯ ವಿಮಾನ ಪತನಗೊಂಡು ಇಬ್ಬರು ಪೈಲಟ್ ಹುತಾತ್ಮರಾಗಿದ್ದಾರೆ...
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಬುದ್ಗಾಮ್ ನಲ್ಲಿ ವಾಯುಸೇನೆಯ ವಿಮಾನ ಪತನಗೊಂಡು ಇಬ್ಬರು ಪೈಲಟ್ ಹುತಾತ್ಮರಾಗಿದ್ದಾರೆ.
ಬುಧವಾರ ಬೆಳಗ್ಗೆ ಬುದ್ಗಾಮ್ ನಲ್ಲಿ ಗಸ್ತು ತಿರುಗುವ ವೇಳೆ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿರುವ ತಂತ್ರಜ್ಞರ ತಂಡ ಪರಿಶೀಲಿಸುತ್ತಿದೆ, ಇಬ್ಬರ ದೇಹಗಳು ಪತ್ತೆಯಾಗಿವೆ ಎಂದು ಬುದ್ಗಾಮ್ ಎಸ್ ಎಸ್ ಪಿ ತಿಳಿಸಿದ್ದಾರೆ.
ಬದ್ಗಾಮ್ ಜಿಲ್ಲೆಯ ಗರೇಂದ್ ಕಲಾನ್ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆ 5 ನಿಮಿಷಕ್ಕೆ ವಿಮಾನ ಪತನಗೊಂಡಿತ್ತು, ಕೆಳಗೆ ಬಿದ್ದ ಜೆಟ್ 2ಭಾಗವಾಯಿತು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.