ಭಾರತೀಯ ಪೈಲಟ್ ಬಂಧನದ ವಿಡಿಯೋ ಬಿಡುಗಡೆ ಮಾಡಿದ ಪಾಕ್
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.
ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು ಹೇಳಿರುವ ವಿಡಿಯೋವನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಇದು ಎಷ್ಟು ನಿಜವೋ ಎಂಬುದು ಇನ್ನು ತಿಳಿದುಬಂದಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.