ಲೋಕಸಭೆ ಚುನಾವಣೆ: ಪಂಜಾಬ್ ನಲ್ಲಿ ಅಕಾಲಿ ದಳ 10, ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ
ಬಿಜೆಪಿ ಮತ್ತು ಅದರ ಹಳೆ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ...
ನವದೆಹಲಿ: ಬಿಜೆಪಿ ಮತ್ತು ಅದರ ಹಳೆ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.
ಇಂದು ಸೀಟು ಹಂಚಿಕೆ ಕುರಿತು ಅಕಾಲಿ ದಳದ ಜತೆ ಮಾತುಕತೆ ನಡೆಸಿದ ಅಮಿತ್ ಶಾ, ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ ಅಕಾಲಿ ದಳ 10 ಸ್ಥಾನಗಳಲ್ಲಿ ಹಾಗೂ ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಅಮಿತ್ ಶಾ ಅವರು ಈ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.