ಇಶ್ರಾತ್ ಜಹಾನ್ ಪ್ರಕರಣದ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಬಡ್ತಿ! 
ದೇಶ

ಇಶ್ರಾತ್ ಜಹಾನ್ ಪ್ರಕರಣದ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಬಡ್ತಿ!

ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಗುಜರಾತ್ ಸರ್ಕಾರ ಬಡ್ತಿ ನೀಡಿದೆ.

ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಗುಜರಾತ್ ಸರ್ಕಾರ ಬಡ್ತಿ ನೀಡಿದೆ. 
ಜಿಎಲ್ ಸಿಂಘಾಲ್ ಇಶ್ರಾತ್ ಜಹಾನ್ ಪ್ರಕರಣದಲ್ಲಿ ಆರೋಪಿಯಾಗಿದ್ದರು.  ಗಾಂಧಿ ನಗರದ ಕಮಾಂಡೋ ತರಬೇತಿ ಕೇಂದ್ರದಲ್ಲಿ ಉಪ ಇನ್ಸ್ಪೆಕ್ಟರ್ ಜನರಲ್ ಆಗಿದ್ದ ಜಿಎಲ್ ಸಿಂಘಾಲ್ ಅವರನ್ನು ಐಜಿ ಹುದ್ದೆಗೆ ಬಡ್ತಿ ನೀಡಿ ನೇಮಕ ಮಾಡಿ ಗುಜರಾತ್ ಸರ್ಕಾರ ಆದೇಶ ಹೊರಡಿಸಿದೆ. 
ಅಷ್ಟೇ ಅಲ್ಲದೇ ಸೋಹ್ರಾಬುದ್ದೀನ್ ಶೇಖ್ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಖುಲಾಸೆಯಾಗಿದ್ದ ವಿಫುಲ್ ಅಗರ್ವಾಲ್ ಅವರಿಗೂ ಸಹ ಬಡ್ತಿ ನೀಡಲಾಗಿದ್ದು, ಅಹ್ಮದಾಬಾದ್ ನ ಜಂಟಿ ಪೊಲೀಸ್ ಆಯುಕ್ತರನ್ನಾಗಿ(ಆಡಳಿತ) ನೇಮಕ ಮಾಡಲಾಗಿದೆ. 
ಇಶ್ರಾತ್ ಜಹಾನ್ ಪ್ರಕರಣದಲ್ಲಿ ಸಿಂಘಾಲ್ ಅವರನ್ನು ಫೆ.2013 ರಲ್ಲಿ ಬಂಧಿಸಲಾಗಿತ್ತು. ಸಿಬಿಐ ಕೋರ್ಟ್ ನಿಂದ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ 2014 ರ ಮೇ ನಲ್ಲಿ ಅವರನ್ನು ರಾಜ್ಯ ಅಪರಾಧ ದಾಖಲಾತಿ ಬ್ಯುರೋ ಎಸ್ ಪಿ ಹುದ್ದೆಯಲ್ಲಿ ಮುಂದುವರೆಸಲಾಗಿತ್ತು.  ಇನ್ನು ವಿಫುಲ್ ಅಗರ್ವಾಲ್ ಅವರನ್ನು 2014 ರ ನವೆಂಬರ್ ನಲ್ಲಿ ಹುದ್ದೆಗೆ ಮರುನೇಮಕಾತಿ ಮಾಡಿಕೊಳ್ಳಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

5 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ