ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 
ದೇಶ

ರಾಜ್ಯಕ್ಕಾಗಿ ಪ್ರಧಾನಿ ಮೋದಿಯವರ ಅಹಂಗೆ ತಲೆ ಬಾಗಿದ್ದೆ: ಆಂಧ್ರ ಸಿಎಂ

ರಾಜ್ಯದ ಹಿತಾಸಕ್ತಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಹಂ ತೃಪ್ತಿಪಡಿಸಲು ತಲೆ ಬಾಗಿದ್ದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ...

ಅಮರಾವತಿ: ರಾಜ್ಯದ ಹಿತಾಸಕ್ತಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಹಂ ತೃಪ್ತಿಪಡಿಸಲು ತಲೆ ಬಾಗಿದ್ದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆಂಧ್ರಪ್ರದೇಶದ ಅಭಿವೃದ್ಧಿ ಹಾಗೂ ಹಿತಾಸಕ್ತಿಗಾಗಿ ಮೋದಿಯವರು ಅಹಂ ತೃಪ್ತಿಪಡಿಸಲು ತಲೆ ಬಾಗಿದ್ದೆ. ಕಳೆದ ನಾಲ್ಕೂವರೆ ವರ್ಷಗಳಿಂದ ನಮ್ಮ ಸರ್ಕಾರ ಒಂದಾದ ಬಳಿಕ ಒಂದರಂತೆ ರಾಜ್ಯದ ಪ್ರಗತಿಗಾಗಿ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಿದ್ದಾರೆ. 
ನಾಲ್ಕು ವರ್ಷಗಳಿಂದ ಕೇಂದ್ರ ರಾಜ್ಯಕ್ಕೆ ಯಾವುದೇ ರೀತಿಯ ಸಹಕಾರವನ್ನೂ ನೀಡಿಲ್ಲ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಸಂಸತ್ತಿನಲ್ಲಿ ಭರವಸೆ ನೀಡಲಾಗಿತ್ತು. ಆದರೆ, ಈಗಲೂ ಆ ಭರವಸೆ ಪೂರೈಸಿಲ್ಲ ಎಂದು ತಿಳಿಸಿದ್ದಾರೆ. 
ಈ ನಡುವೆ ನಾಲ್ಕು ವರ್ಷಗಳಲ್ಲಿ ಸರ್ಕಾರದ ವಿತ್ತ ಹಾಗೂ ಆರ್ಥಿಕ ಬೆಳವಣಿಗೆ ಕುರಿತಂತೆ ಚಂದ್ರಬಾಬು ನಾಯ್ಡು ಅವರು ಶ್ವೇತಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಇದು ಸರ್ಕಾರ 10ನೇ ಹಾಗೂ ಕಡೆಯ ಶ್ವೇತಪತ್ರವಾಗಿದೆ ಎಂದು ತಿಳಿಸಿದ್ದಾರೆ. 
ನಾಳೆಯಿಂದ ಜನ್ಮಭೂಮಿ-ಮಾ ವೂರು ಕಾರ್ಯಕ್ರಮ ಆರಂಭವಾಗಲಿದ್ದು, ಜನರಿಗೆ ಇದರ ಬಗ್ಗೆ ಮಾಹಿತಿ ನೀಡಲಾಗುತ್ತದೆ. ರಾಜ್ಯ ವಿಭಜನೆಗೊಳ್ಳುವಾಗ ಬರುತ್ತಿದ್ದ ಆದಾಯ ಶೇ.46 ಇತ್ತು. ಶೇ.56ರಷ್ಟು ಜನಸಂಖ್ಯೆಯಿತ್ತು. ವಿಭಜನೆಗೊಂಡ ಬಳಿಕ ಜನಸಂಖ್ಯೆ ಆಧಾರದ ಮೇಲೆ ಆದಾಯಗಳು ಇಬ್ಬಾಗಗೊಂಡಿತು. ಇದರಿಂದ ಆಂಧ್ರಪ್ರದೇಶಕ್ಕೆ ದೊಡ್ಡ ನಷ್ಟವೇ ಸಂಭವಿಸಿತು ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT