ದೇಶ

ರಫೇಲ್ ವಿವಾದ: ತೀರ್ಪು ಮರುಪರಿಶೀಲನೆಗೆ ಯಶವಂತ್ ಸಿನ್ಹಾ, ಅರುಣ್ ಶೌರಿ 'ಸುಪ್ರೀಂ' ಮೊರೆ

Manjula VN
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಕುರಿತಂತೆ ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿಯವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. 
ರಫೇಲ್ ವಿವಾದ ಸಂಬಂಧ ಕಳೆದ ಡಿ.14 ರಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ಫ್ರಾನ್ಸ್ ನಿಂದ ಭಾರತ ಪಡೆಯಲಿರುವ 36 ರಫೇಲ್ ಜೆಟ್ ಖರೀದಿ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಜಾ ಮಾಡಿತ್ತು. 
ತೀರ್ಪು ಕುರಿತಂತೆ ಇದೀಗ ಮೇಲ್ಮನವಿ ಸಲ್ಲಿಸಿರುವ ಯಶವಂತ್ ಸಿನ್ಹಾ ಹಾಗೂ ಅರುಣ್ ಶೌರಿಯವರು ಕೇಂದ್ರ ಸರ್ಕಾರದ ಸಹಿ ಇಲ್ಲದ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ತಪ್ಪು ಮಾಹಿತಿಗಳ ಆಧಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದ್ದರಿಂದ ತೀರ್ಪನ್ನು ಮರು ಪರಿಶೀಲನೆ ನಡೆಸಬೇಕು. ಮತ್ತು ವಿಚಾರಣೆಯನ್ನು ಮುಕ್ತ ನ್ಯಾಯಾಲಯದಲ್ಲಿ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 
SCROLL FOR NEXT