ನಾವು ಪವಿತ್ರ 18 ಮೆಟ್ಟಿಲುಗಳ ಏರಿ ದೇಗುಲ ಪ್ರವೇಶ ಮಾಡಲಿಲ್ಲ: ಮಹಿಳೆ ಹೇಳಿಕೆ
ವಿಶ್ವ ವಿಖ್ಯಾತ ಧಾರ್ಮಿಕ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯ ಪ್ರವೇಶ ಭಾರಿ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ದೇಗುಲ ಪ್ರವೇಶ ಮಾಡಿದ ಮಹಿಳೆ, ತಾವು ಪವಿತ್ರ 18 ಮೆಟ್ಟಿಲುಗಳ ಏರಿ ದೇಗುಲ ಪ್ರವೇಶ ಮಾಡಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಕೊಚ್ಚಿ: ವಿಶ್ವ ವಿಖ್ಯಾತ ಧಾರ್ಮಿಕ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯ ಪ್ರವೇಶ ಭಾರಿ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ದೇಗುಲ ಪ್ರವೇಶ ಮಾಡಿದ ಮಹಿಳೆ, ತಾವು ಪವಿತ್ರ 18 ಮೆಟ್ಟಿಲುಗಳ ಏರಿ ದೇಗುಲ ಪ್ರವೇಶ ಮಾಡಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ದೇಗುಲ ಪ್ರವೇಶದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮಹಿಳೆ ನಾವು ದೇಗುಲದ ಪವಿತ್ರ 18 ಮೆಟ್ಟಿಲುಗಳ ಮೂಲಕ ದೇಗುಲದ ಪ್ರವೇಶ ಮಾಡಲಿಲ್ಲ. ಬದಲಿಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿಗಳ ಮೆಟ್ಟಿಲುಗಳ ಮೂಲಕ ದೇಗುಲ ಪ್ರವೇಶ ಮಾಡಿದೆವು ಎಂದು ಹೇಳಿಕೆ ನೀಡಿದ್ದಾರೆ.
ಮಹಿಳೆಯರಿಗೆ ಪೊಲೀಸ್ ಭದ್ರತೆ
ಇನ್ನು ಮಹಿಳೆಯರ ದೇಗುಲ ಪ್ರವೇಶ ವಿಚಾರ ದೇಶಾದ್ಯಂತ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಮಹಿಳೆಯರಿಗೆ ಪೊಲೀಸ್ ರಕ್ಷಣೆ ಒದಗಿಸಲಾಗಿದೆ. ಕೇರಳ ಸರ್ಕಾರದ ಆದೇಶದ ಅನ್ವಯ ಮಹಿಳೆಯರಿಗೆ ಮತ್ತು ಅವರ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.