ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ(ಎಲ್ಒಸಿ) ಭಾರೀ ಹಿಮಪಾತ ಸಂಭವಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸೇನಾ ಪೋಸ್ಟ್ ಮೇಲೆ ಸಂಭವಿಸಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮದ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಯೋಧರನ್ನು ತಕ್ಷಣ ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಲ್ಯಾನ್ಸ್ ನಾಯಕ್ ಸಪನ್ ಮೆಹ್ರಾ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಗಾಯಗೊಂಡಿರುವ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.