ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಲು ಸಾಧ್ಯವಾಗದಿದ್ದರೆ ತಂತ್ರಿಗಳು ರಾಜೀನಾಮೆ ನೀಡಲಿ: ಕೇರಳ ಸಿಎಂ

ಸಂಘ ಪರಿವಾರದವರು ಪುಣ್ಯ ಕ್ಷೇತ್ರವಾಗಿರುವ ಶಬರಿಮಲೆಯನ್ನು ಹಿಂಸಾಚಾರ ಪ್ರದೇಶ ಮಾಡುತ್ತಿದ್ದಾರೆಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಹೇಳಿದ್ದಾರೆ...

ತಿರುವನಂತಪುರ: ಸಂಘ ಪರಿವಾರದವರು ಪುಣ್ಯ ಕ್ಷೇತ್ರವಾಗಿರುವ ಶಬರಿಮಲೆಯನ್ನು ಹಿಂಸಾಚಾರ ಪ್ರದೇಶ ಮಾಡುತ್ತಿದ್ದಾರೆಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಹೇಳಿದ್ದಾರೆ. 
ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರು ಪ್ರವೇಶಿಸುವಂತಿಲ್ಲ ಎಂಬ 800 ವರ್ಷಗಳ ಸಂಪ್ರದಾಯವನ್ನು ಇಬ್ಬರು ಮಹಿಳೆಯಲು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಹಿಳೆಯರಿಗೆ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಸರ್ಕಾರ ಸಂವಿಧಾನದ ಜವಾಬ್ದಾರಿಯನ್ನು ಪೂರ್ಣಗೊಳಿಸಿದೆ. ಸಂಘ ಪರವಾರದವರು ಶಬರಿಮಲೆಯನ್ನು ಗಲಭೆ ಪೀಡಿತ ಪ್ರದೇಶ ಮಾಡುತ್ತಿದ್ದಾರೆಂದು ಹೇಳಿದ್ದಾರೆ. 
ಕೇರಳ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಈ ವರೆಗೂ 7 ಪೊಲೀಸ್ ವಾಹನಗಳು, 76 ಕೇರಳ ರಾಜ್ಯ ಬಸ್ ಗಳನ್ನು ನಾಶಪಡಿಸಿದ್ದಾರೆ. ಇದಲ್ಲದೆ, 39 ಪೊಲೀಸ್ ಸಿಬ್ಬಂದಿಗಳ ಮೇಲೆಯೂ ದಾಳಿ ನಡೆದಿದೆ. ಇದರಲ್ಲಿ ಬಹುತೇಕರು ಮಹಿಳಾ ಪೊಲೀಸರೇ ಆಗಿದ್ದಾರೆ. ಮಹಿಳಾ ಮಾಧ್ಯಮ ಪ್ರತಿನಿಧಿಗಳ ಮೇಲೂ ದಾಳಿ ನಡೆದಿದೆ.
ಮಹಿಳೆಯರ ಪ್ರವೇಶ ಕುರಿತು ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲು ಸಾಧ್ಯವಿಲ್ಲ ಎಂದು ಹೇಳುವ ತಂತ್ರಿಗಳು, ಮುಖ್ಯ ಅರ್ಚಕರು ರಾಜಿನಾಮೆ ನೀಡಬಹುದು. ದೇಗುಲ ಮುಚ್ಚುವುದು ಅಥವಾ ಮುಚ್ಚದೇ ಇರುವುದನ್ನು ದೇವಸ್ವಂ ಮಂಡಳಿ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ. 
ನಿನ್ನೆ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ದಕ್ಕೆ ಇಂದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದರೆ, ಶಬರಿಮಲೆ ಪ್ರವೇಶಿಸಿದ್ದ ಈ ಇಬ್ಬರು ಮಹಿಳೆಯರಿಗೆ ಅಲ್ಲಿದ್ದ ಭಕ್ತರೇ ದೇಗುಲ ಪ್ರವೇಶಿಸಲು ಸಹಾಯ ಮಾಡಿದ್ದರು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್