ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿರುವುದಾಗಿ ಭಾರತೀಯ ಸೇನೆ ತಿಳಿಸಿದೆ.
ಅರಣ್ಯದಲ್ಲಿ ಕನಿಷ್ಠ ಇಬ್ಬರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸೇನೆ, ತ್ರಾಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು. 
ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಪ್ರತಿದಾಳಿ ನಡೆಸಿದ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ ಕಾರ್ಯಾಚರಣೆ ವೇಳೆ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಹತ್ಯೆಯಾದ ಉಗ್ರರನ್ನು ಜುಬೈರ್ ಅಹ್ಮದ್ ಭಟ್, ಶಾಕೂರ್ ಅಹ್ಮದ್ ಪರ್ಯಾ ಅಲಿಯಾಸ್ ಜಾಫರ್ ಹಾಗೂ ತವ್ಸೀಪ್ ಅಹ್ಮದ್ ಥಾಕೂರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT