ಸಂಸತ್ತಿನಲ್ಲಿ ಮತ್ತೆ ಕಣ್ಣು ಹೊಡೆದ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಇಂದು ಮತ್ತೆ ಕಣ್ಣು ಹೊಡೆದಿದ್ದಾರೆ. ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ನಡೆಯುತ್ತಿದ್ದ ಚರ್ಚೆ ವೇಳೆಯಲ್ಲಿ ರಾಹುಲ್ ಗಾಂಧಿ ಮತ್ತೆ ಕಣ್ಣು ಹೊಡೆದಿರುವುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಇಂದು ಮತ್ತೆ ಕಣ್ಣು ಹೊಡೆದಿದ್ದಾರೆ. ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ನಡೆಯುತ್ತಿದ್ದ ಚರ್ಚೆ ವೇಳೆಯಲ್ಲಿ ರಾಹುಲ್ ಗಾಂಧಿ ಮತ್ತೆ ಕಣ್ಣು ಹೊಡೆದಿರುವುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.
ಟಿಡಿಪಿಯಿಂದ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವೇಳೆಯಲ್ಲಿ ಪ್ರಧಾನಿ ಮೋದಿ ಅವರನ್ನು ಅಲಂಗಿಸಿಕೊಂಡು ನಂತರ ಜ್ಯೂತಿರಾದ್ಯಿತ್ಯ ಸಿಂದಿಯಾ ಅವರತ್ತ ತಿರುಗಿ ಕಣ್ಣು ಹೊಡೆಯುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮತ್ತೆ ಈ ರೀತಿಯ ಕಣ್ಣು ಮಿಟುಕಿಸಿದ್ದಾರೆ. ಆದರೆ, ಇದು ಸ್ಪಷ್ಟವಾಗಿ ಕಂಡುಬಂದಿಲ್ಲ.
ಲೋಕಸಭೆ ಡೆಪ್ಯೂಟಿ ಸ್ಪೀಕರ್ ಎಂ. ತಂಬಿದೂರೈ, ಮೇಕ್ ಇನ್ ಇಂಡಿಯಾ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಹೆಚ್ ಎಎಲ್ ಗೆ ನೀಡದೆ ಅನಿಲ್ ಅಂಬಾನಿ ಅವರ ರಿಲಯನ್ಸ್ ಕಂಪನಿಗೆ ನೀಡಲಾಗಿದೆ ಎಂದು ಮಾತನಾಡುತ್ತಿದ್ದರು.
ಈ ಸಂದರ್ಭ ತಂಬಿದೂರೈ ಹಿಂದಿನ ಸೀಟಿನಲ್ಲಿ ಕುಳಿತಿದ್ದ ರಾಹುಲ್ ಗಾಂಧಿ ಮೇಜು ತಟ್ಟುವ ಮೂಲಕ ಕಣ್ಣು ಹೊಡೆದಿದ್ದಾರೆ. ಇದು ಲೋಕಸಭೆ ಟಿವಿಯಲ್ಲಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದು ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಆಗುತ್ತಿದೆ.